HEALTH TIPS

ಸ್ವಾಮಿನಾಥನ್‌, ಪದ್ಮನಾಭನ್‌ಗೆ ವಿಜ್ಞಾನ ಪ್ರಶಸ್ತಿ

                ತಿರುವನಂತಪುರಂ: ಭಾರತದ 'ಹಸಿರು ಕ್ರಾಂತಿಯ ಪಿತಾಮಹ', ಖ್ಯಾತ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್ ಮತ್ತು ಖ್ಯಾತ ಭೌತಶಾಸ್ತ್ರಜ್ಞ ತನು ಪದ್ಮನಾಭನ್ ಅವರನ್ನು 2021ನೇ ಸಾಲಿನ ಕೇರಳದ ವಿಜ್ಞಾನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

              ಪ್ರಶಸ್ತಿಯು ₹2 ಲಕ್ಷ ನಗದು, ಪ್ರಶಸ್ತಿ ಫಲಕ ಮತ್ತು ಅಭಿನಂದನಾ ಪತ್ರವನ್ನು ಒಳಗೊಂಡಿದೆ ಎಂದು ಮಂಗಳವಾರ ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

          ಎಂ.ಎಸ್.ಸ್ವಾಮಿನಾಥನ್ ಅವರು ಕೃಷಿ ಸಂಶೋಧನಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ತನು ಪದ್ಮನಾಭನ್ ಅವರು ಭೌತಶಾಸ್ತ್ರ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.

            ವಿಜ್ಞಾನ ಕ್ಷೇತ್ರದ ಈ ಅತ್ಯುನ್ನತ ಪ್ರಶಸ್ತಿಯನ್ನು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಮತ್ತು ಕೇರಳ ರಾಜ್ಯ ವಿಜ್ಞಾನ, ತಂತ್ರಜ್ಞಾನ ಮತ್ತು ಪರಿಸರ ಮಂಡಳಿ ಜಂಟಿಯಾಗಿ ಸ್ಥಾಪಿಸಿವೆ. ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ವಿಜ್ಞಾನಿಗಳಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries