HEALTH TIPS

ಒಡಿಶಾದಲ್ಲಿ ಪತಿ ಸಹಗಮನ?; ದುಃಖದಲ್ಲಿ ಪತ್ನಿಯ ಚಿತೆಗೆ ಹಾರಿ ಪ್ರಾಣಬಿಟ್ಟ ವೃದ್ಧ

                       ಭವಾನಿಪಟ್ನಾ (ಒಡಿಶಾ): ಪತ್ನಿಯನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದ ವೃದ್ಧರೊಬ್ಬರು, ಪತ್ನಿಯ ಚಿತೆಗೆ ಹಾರಿ ಜೀವ ಕಳೆದುಕೊಂಡಿರುವ ಘಟನೆ ಕಾಲಹಂದಿ ಜಿಲ್ಲೆ ಗೋಲಮುಂಡ ತಾಲ್ಲೂಕಿನ ಸಿಯಾಲ್‌ಜೋಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

            ನೀಲಮಣಿ ಸಬರ್‌ (65) ಚಿತೆಗೆ ಹಾರಿದ ವ್ಯಕ್ತಿ. ಇವರು ತನ್ನ ಪತ್ನಿ ರಾಯಿಬರಿ (60) ಅವರ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಇವರ ನಾಲ್ವರು ಪುತ್ರರು ಮತ್ತು ಸಂಬಂಧಿಕರು ಸಂಪ್ರದಾಯದಂತೆ ಸ್ನಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನೀಲಮಣಿ ಅವರು ಗ್ರಾಮ ಪಂಚಾಯಿತಿ ಸಮಿತಿಯ ಮಾಜಿ ಸದಸ್ಯರಾಗಿದ್ದರು.

            ಈ ಘಟನೆಯ ಬಗ್ಗೆ ಅವರ ಕುಟುಂಬದವರು ಮಾಹಿತಿ ನೀಡಿಲ್ಲ ಎಂದು ಕೆಗಾಂವ್‌ ಠಾಣೆಯ ಪ್ರಭಾರ ಇನ್‌ಸ್ಪೆಕ್ಟರ್ ದಮು ಪರಜ ತಿಳಿಸಿದ್ದು, 'ಇತರ ಮೂಲಗಳಿಂದ ಈ ವಿಷಯ ಗಮನಕ್ಕೆ ಬಂದಿದ್ದು, ನಾನು ಸ್ಥಳಕ್ಕೆ ಭೇಟಿ ನೀಡಲಿದ್ದೇನೆ' ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries