HEALTH TIPS

ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ; ಕೇರಳ ಸರ್ಕಾರಕ್ಕೆ ತೀವ್ರ ಹಿನ್ನಡೆ

            ತಿರುವನಂತಪುರಂಕೇರಳದ ಪಿಣರಾಯಿ ವಿಜಯನ್ ಸರ್ಕಾರಕ್ಕೆ ತೀವ್ರ ಹಿನ್ನೆಡೆಯುಂಟಾಗಿದ್ದು, ಕೇಂದ್ರೀಯ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

          ಹೈಕೋರ್ಟ್ ನ್ಯಾಯಾಧೀಶರಾದ ವಿ.ಕೆ ಮೋಹನನ್ ನೇತೃತ್ವದಲ್ಲಿ ಕೇರಳ ಸರ್ಕಾರ ರಚಿಸಿದ್ದ ನ್ಯಾಯಾಂಗ ಆಯೋಗಕ್ಕೆ ಹೈಕೋರ್ಟ್ ತಡೆ ನೀಡಿದೆ. ಚಿನ್ನ ಹಾಗೂ ಡಾಲರ್ ಕಳ್ಳಸಾಗಣೆ ಪ್ರಕರಣ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ತನಿಖೆಗೆ ನ್ಯಾಯಾಂಗ ತನಿಖೆಗೆ ಕೇರಳ ಸರ್ಕಾರ ಸಮಿತಿ ರಚನೆ ಮಾಡಿತ್ತು.

          ಜಾರಿ ನಿರ್ದೇಶನಾಲಯ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದ್ದು, ಈ ಸಂಬಂಧ ಸಿಎಂ ಪಿಣರಾಯಿ ವಿಜಯನ್ ಹಾಗೂ ತನಿಖಾ ಆಯೋಗಕ್ಕೆ ನೊಟೀಸ್ ಜಾರಿಗೊಳಿಸಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

           ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ಹಾಗೂ ಎಸ್ ವಿ ರಾಜು, ಸಹಾಯಕ ಸಾಲಿಸಿಟರ್ ಜನರಲ್ ಪಿ ವಿಜಯ್ ಕುಮಾರ್ ಹಾಗೂ ವಿಶೇಷ ಪ್ರಾಸಿಕ್ಯೂಟರ್ ಟಿಎ ಉನ್ನಿಕೃಷ್ಣನ್ ಇ.ಡಿ ಹಾಗೂ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಿಂದ ಮುಖ್ಯಮಂತ್ರಿಗಳು, ಮಂತ್ರಿಗಳ ವಿರುದ್ಧ ಪಿತೂರಿ ನಡೆಸಲಾಗಿತ್ತೇ? ಎಂಬ ಬಗ್ಗೆ ತನಿಖೆ ನಡೆಸಲು ಆಯೋಗವನ್ನು ಕೇಳಲಾಗಿತ್ತು.

          ಸೀಮಾ ಸುಂಕ ಹಾಗೂ ಜಾರಿ ನಿರ್ದೇಶನಾಲಯದ ಏಜೆನ್ಸಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಆಡಳಿತ ಪಕ್ಷವನ್ನು ತಪ್ಪಾಗಿ ಸಿಲುಕಿಸಲು ಯತ್ನಿಸುತ್ತಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries