ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಕಟ್ಟುನಿಟ್ಟು ಕಡ್ಡಾಯವಾಗಿ ಪಾಲಿಸುತ್ತಿರುವ ವ್ಯಾಪಾರಿಗಳಿಗೆ ಜಿಲ್ಲಾ ಪೆÇಲೀಸರು ಅಭಿನಂದನೆ ನಡೆಸುವರು.
ಜಿಲ್ಲಾ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ಈ ತೋರ್ಮಾನ ಕೈಗೊಳ್ಳಲಾಗಿದೆ. ಲಾಕ್ ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ವ್ಯಾಪಾರ ಕೇಂದ್ರಗಳು ಸಕ್ರಿಯವಾಗಿ ಚಟುವಟಿಕೆ ಆರಂಭಿಸಿವೆ. ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿರುವ ವ್ಯಾಪಾರ ಕೇಂದ್ರಗಳಲ್ಲಿ ಅತ್ಯುತ್ತಮ ರೀತಿ ಕಟ್ಟುನಿಟ್ಟು ಪಾಲನೆಗೆ ಗಮನಹರಿಸುತ್ತಿರುವ ವ್ಯಾಪಾರಿಗಳನ್ನು ಅಭಿನಮದಿಸಲಾಗುವುದು. ಇದೇ ವೇಳೆ ಕಟ್ಟುನಿಟ್ಟು ಉಲ್ಲಂಘಿಸುವ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಕೆ ನೀಡಿದ್ದಾರೆ.

