ಮಂಜೇಶ್ವರ: ಮಂಜೇಶ್ವರದ ಹೊಸಂಗಡಿ ದುರ್ಗಿಪಳ್ಳದ ಕೇರಳ ತುಳು ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಕೇರಳ ತುಳು ಅಕಾಡೆಮಿ ಅಧ್ಯಕ್ಷ, ಹಿರಿಯ ರಂಗಕರ್ಮಿ ಉಮೇಶ್ ಎಂ.ಸಾಲ್ಯಾನ್ ಧ್ವಜಾರೋಹನ ನಡೆಸಿದರು. ಕರ್ನಾಟಕ ಗಮಕ ಕಲಾ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಟಿ.ಶಂಕರನಾರಾಯಣ ಭಟ್, ಕೇರಳ ತುಳು ಅಕಾಡೆಮಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.





