ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿ ಅಧಿಕಾರದಲ್ಲಿರುವ ವಿವಿಧ ರಾಜ್ಯ ಸರ್ಕಾರಗಳು ಮೆಗಾ ಲಸಿಕಾ ಅಭಿಯಾನ ನಡೆಸಿದ್ದವು.
ಪ್ರಧಾನಿಯವರ ಜನ್ಮದಿನದಂದು ಭಾರತವು ಇತಿಹಾಸ ರಚಿಸಿದೆ. 2.5 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡುವ ಮೂಲಕ ವಿಶ್ವದ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಬರೆದಿದೆ. ಇದು ಆರೋಗ್ಯ ಕಾರ್ಯಕರ್ತರ ದಿನ. ಅವರಿಗೆ ಧನ್ಯವಾದಗಳು’ ಎಂದು ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಟ್ವೀಟ್ ಮಾಡಿದ್ದಾರೆ.




