HEALTH TIPS

ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನಕ್ಕೆ ಮುತ್ತಿಟ್ಟ ಬ್ಯಾಡ್ಮಿಂಟನ್ ಆಟಗಾರ ಪ್ರಮೋದ್

            ಟೋಕಿಯೊ: ಹಾಲಿ ವಿಶ್ವ ಚಾಂಪಿಯನ್ ಪ್ರಮೋದ್ ಭಗತ್ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್ (ಎಸ್ ಎಲ್ 3)ನಲ್ಲಿ ಚಿನ್ನದ ಪದಕವನ್ನು ಜಯಿಸಿದರು.

             ಶನಿವಾರ ನಡೆದ ಫೈನಲ್ ನಲ್ಲಿ ಬ್ರಿಟನ್ ನ ಡೇನಿಯಲ್ ಬೆಥೆಲ್ ಅವರನ್ನು 21-14, 21-17 ಗೇಮ್ ಗಳಿಂದ ಸೋಲಿಸಿದರು.

           33ರ ಹರೆಯದ ಪ್ರಮೋದ್ ವಿಶ್ವದ ನಂ.1 ಆಟಗಾರನಾಗಿದ್ದು, ಹಾಲಿ ಏಶ್ಯನ್ ಚಾಂಪಿಯನ್ ಆಗಿದ್ದಾರೆ. ಶನಿವಾರ 36 ನಿಮಿಷಗಳಲ್ಲಿ ಅಂತ್ಯಗೊಂಡ ಪುರುಷರ ಸಿಂಗಲ್ಸ್ ಎಸ್ ಎಲ್ 3 ಕ್ಲಾಸ್ ಸೆಮಿ ಫೈನಲ್ ನಲ್ಲಿ ಜಪಾನ್ ಆಟಗಾರನನ್ನು 21-11, 21-16 ಗೇಮ್ ಗಳ ಅಂತರದಿಂದ ಸೋಲಿಸಿದ್ದರು.

ಮನೋಜ್ ಸರ್ಕಾರ್ ಗೆ ಕಂಚು

               ಬ್ಯಾಡ್ಮಿಂಟನ್ ನ ಪುರುಷರ ಸಿಂಗಲ್ಸ್ ಎಸ್‌ಎಲ್ 3 ವಿಭಾಗದಲ್ಲಿ ಭಾರತದ ಮನೋಜ್ ಸರ್ಕಾರ್ ಜಪಾನ್‌ನ ಆಟಗಾರ ಡೈಸುಕೆ ಫುಜಿಹರಾ ಅವರನ್ನು 22-20, 21-13 ಗೇಮ್ ಗಳ ಅಂತರದಿಂದ ಸೋಲಿಸಿ ಕಂಚಿನ ಪದಕ ಗೆದ್ದರು.

              ಈ ಮೂಲಕ ಪುರುಷರ ಸಿಂಗಲ್ಸ್ ಎಸ್ ಎಲ್ 3 ಕ್ಲಾಸ್ ವಿಭಾಗದಲ್ಲಿ ಭಾರತವು ಚಿನ್ನ ಹಾಗೂ ಕಂಚಿನ ಪದಕ ತನ್ನದಾಗಿಸಿಕೊಂಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries