ಕಾಸರಗೋಡು: ಕೇರಳದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ನರೇಂದ್ರಮೋದಿ ನೇತ್ರತ್ವದ ಎನ್‍ಡಿಎ ಸರ್ಕಾರದ ಕಾಲಾವಧಿಯಲ್ಲಿ ಹೆಚ್ಚಿನ ಧನಸಹಾಯ ಲಭ್ಯವಾಗಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ತಿಳಿಸಿದ್ದಾರೆ.
ಅವರು ಬಿಜೆಪಿ ಜಿಲ್ಲಾ ಕಚೇರಿಯ ಶ್ಯಾಂ ಪ್ರಸಾದ್ ಮುಖರ್ಜಿ ಸಭಾಂಗಣದಲ್ಲಿ ಶುಕ್ರವಾರ ಕೇಂದ್ರ ಕಲ್ಯಾಣಾಭಿವೃದ್ಧಿ ಯೋಜನೆಗಳ ಫಲಾನುಭವಿಗಳ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದೇಶದಲ್ಲಿ ಉದ್ಯೋಗದಲ್ಲಿರುವವರ ಆದಾಯದಿಂದ ಕೇರಳದಲ್ಲಿ ಅಭಿವೃದ್ಧಿಕಾರ್ಯಗಳು ನಡೆಯುತ್ತಿದ್ದು, ಕಂದಾಯ ಸಹಿತ ವಿವಿಧ ಮೂಲಗಳ ಆದಾಯ ಕುಸಿತ ರಾಜ್ಯಕ್ಕೆ ಕಂಟಕವಾಗಿ ಪರಿಣಮಿಸಿದೆ. ಕೇಂದ್ರಸರ್ಕಾರದ ನಿರಂತರ ಬೆಂಬಲದಿಂದ ಮಾತ್ರ ಸರ್ಕಾರ ಉತ್ತಮ ರೀತಿಯಲ್ಲಿ ಮುನ್ನಡೆಯುವಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಕಾರ್ಯದರ್ಶಿ ರಘುನಾಥ್, ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರಮಿಳಾ ಸಿ.ನಾಯ್ಕ್, ಪಿ.ರಮಶ್, ಎನ್. ಸತೀಶ್, ಸುಕುಮಾರ್ ಕುದ್ರೆಪ್ಪಾಡಿ, ಪಿ.ಆರ್. ಸುನಿಲ್ ಮುಂತಾದವರು ಉಪಸ್ಥಿತರಿದ್ದರು.





