ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯಲ್ಲಿ ಸೆ. 25 ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಶಾಲಾ ಸಂಚಾಲಕರಾಗಿದ್ದ ದಿ.ಯಂ ರಾಮಕೃಷ್ಣ ರಾವ್ ಅವರ 16ನೆಯ ಪುಣ್ಯತಿಥಿಯ ಸಂದರ್ಭದಲ್ಲಿ ಸಂಸ್ಮರಣೆ ಮತ್ತು ಸನ್ಮಾನ ಕಾರ್ಯಕ್ರಮ ಮೀಯಪದವು ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯ ರಂಗ ಮಂಟಪದಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ಗೋಪಾಲಕೃಷ್ಣ ಭಟ್ ಅಧ್ಯಕತೆ ವಹಿಸುವರು. ಡಾ. ಉದಯಕುಮಾರ್ ನೂಜಿ ವ್ಯವಸ್ಥಾಪಕರು ಸಾಯಿನಿಕೇತನ ಸೇವಾಶ್ರಮ ದೈಗೋಳಿ, ದಿನೇಶ್ ವಿ ಉಪಜಿಲ್ಲಾ ವಿದ್ಯಾಧಿಕಾರಿಗಳು ಮಂಜೇಶ್ವರ, ಡಾ. ಪ್ರಭಾಕರ್ ರೈ ಆರೋಗ್ಯ ಅಧಿಕಾರಿ ಮೀಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ರಮೇಶ ಕೌಡೂರು ಸಿಂಡಿಕೇಟ್ ಸದಸ್ಯ ಮಂಗಳೂರು ವಿಶ್ವವಿದ್ಯಾನಿಲಯ ಸನ್ಮಾನ ಸ್ವೀಕರಿಸಲಿದ್ದಾರೆ. ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ ಪ್ರಾಸ್ತಾವಿಕವಾಗಿ ಮಾತನಾಡುವರು.





