ತಿರುವನಂತಪುರಂ: ನವೆಂಬರ್ 1 ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭಗೊಳ್ಳಲಿದ್ದು, ರಾಜ್ಯ ಪೋಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರು ಪೆÇಲೀಸರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಮಕ್ಕಳಿಗೆ ಸಂಬಂಧಿಸಿದ ಸುರಕ್ಷತೆ ಮತ್ತು ಆರೋಗ್ಯ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಠಾಣಾ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಮುಖ್ಯ ಶಿಕ್ಷಕರ ಸಭೆ ಕರೆಯಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಸ್ಟೇಷನ್ ಹೌಸ್ ಅಧಿಕಾರಿಗಳು ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಲಿದ್ದಾರೆ. ಶಾಲಾ ಬಸ್ಸುಗಳು ಉತ್ತಮ ಸ್ಥಿತಿಯಲ್ಲಿರಬೇಕು. ದುರಸ್ತಿ ಅಗತ್ಯವಿದ್ದರೆ, ಅಕ್ಟೋಬರ್ 20 ರೊಳಗೆ ಪೂರ್ಣಗೊಳಿಸಬೇಕು. 10 ವರ್ಷಗಳಿಗಿಂತ ಹೆಚ್ಚಿನ ಹಳಮೆಯ ಶಾಲಾ ವಾಹನಗಳನ್ನು ಬಳಸಲು ಅನುಮತಿ ಇರುವುದಿಲ್ಲ. ಶಾಲಾ ಬಸ್‍ಗಳಲ್ಲಿ ಸ್ಪೀಡ್ ಗವರ್ನರ್‍ಗಳನ್ನು ಅಳವಡಿಸಬೇಕು. ಇಂತಹ ವಿಷಯಗಳಲ್ಲಿ ಮೋಟಾರ್ ವಾಹನ ಇಲಾಖೆಯ ಸಹಾಯವನ್ನು ಪಡೆಯಬೇಕು.
ಕೊರೊನಾ ಮಾನದಂಡಗಳಿಗೆ ಅನುಸಾರವಾಗಿ ಮಾತ್ರ ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅನುಮತಿಸಬೇಕು ಎಂದು ನಿರ್ದೇಶನವು ಹೇಳುತ್ತದೆ. ಎಲ್ಲಾ ಶಾಲೆಗಳು ಶಿಕ್ಷಕರನ್ನು ಶಾಲಾ ಸುರಕ್ಷತಾ ಅಧಿಕಾರಿಯಾಗಿ ನೇಮಿಸಬೇಕು. ಸ್ಟೇಷನ್ ಹೌಸ್ ಆಫೀಸರ್ ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡುತ್ತಾರೆ ಮತ್ತು ಸೂಚನೆಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುತ್ತಾರೆ. ಪ್ರತಿ ದಿನ ಸೂಚನೆಗಳನ್ನು ಮೌಲ್ಯಮಾಪನ ಮಾಡುವಂತೆ ರಾಜ್ಯ ಪೋಲೀಸ್ ಮುಖ್ಯಸ್ಥರು ಜಿಲ್ಲಾ ಪೋಲೀಸ್ ಮುಖ್ಯಸ್ಥರಿಗೆ ಸೂಚಿಸಿರುವರು.





