ಕುಂಬಳೆ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ವತಿಯಿಂದ ಕೆ ಟಿ ವೇಣುಗೋಪಾಲ್ ಕಪಸಮ ರಾಷ್ಟ್ರೀಯ ಮಾಧ್ಯಮ ಶ್ರೀ -2021 ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಪತ್ರಕರ್ತ ಅಚ್ಯುತ ಚೇವಾರ್ ಅವರನ್ನು ಶಾಸಕ ಎ.ಕೆ.ಎಂ ಅಶ್ರಫ್ ಶಾಲು ಹೊದಿಸಿ ಗೌರವಿಸಿದರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆ.19ರಂದು ಬೆಳಗ್ಗೆ 10.30ಕ್ಕೆ ಮುಂಬಯಿ ಲೋಟಸ್ ಸಭಾಗೃಹದಲ್ಲಿ ನಡೆಯಲಿದೆ. ಕಪಸಮ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ ಸಮಾರಂಭದಲ್ಲಿ ಅತಿಥಿ ಗಣ್ಯ ಪ್ರಮುಖರು ಪುರಸ್ಕಾರ ಪ್ರದಾನಿಸಲಿರುವರು.


