HEALTH TIPS

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಸೇರಿಸಲು ಸಕಾಲವಲ್ಲ: ಸೀತಾರಾಮನ್:

              ನವದೆಹಲಿ: ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವೆ ತೆರಿಗೆ(ಜಿಎಸ್‌ಟಿ) ವ್ಯಾಪ್ತಿಗೆ ಸೇರಿಸುವುದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇಂಧನದ ಬೆಲೆಯನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಲು ಇದು ಸರಿಯಾದ ಸಮಯವಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


               ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ಹಣಕಾಸು ಸಚಿವರು ಮತ್ತು ಜಿಎಸ್‌ಟಿ ಕೌನ್ಸಿಲ್ ಸಭೆ ಸದಸ್ಯರೊಂದಿಗೆ 45ನೇ ಸಭೆ ನಡೆಸಿದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಕಳೆದ 2019 ಡಿಸೆಂಬರ್ 18ರ ಬಳಿಕ ಮೊದಲ ಬಾರಿಗೆ ಜಿಎಸ್‌ಟಿ ಕೌನ್ಸಿಲ್ ಸಭೆಯನ್ನು ನಡೆಸಲಾಯಿತು.

          ಶುಕ್ರವಾರ ನಡೆಸಿದ ಜಿಎಸ್‌ಟಿ ಕೌನ್ಸಿಲ್ ಸಭೆಯ ಮುಖ್ಯ ಧ್ಯೇಯೋದ್ದೇಶವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶದ ಏಕರೂಪ ತೆರಿಗೆ ನೀತಿ ಆಗಿರುವ ಜಿಎಸ್‌ಟಿ ವ್ಯಾಪ್ತಿಗೆ ಸೇರಿವುವುದೇ ಆಗಿತ್ತು. ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸೇರಿಸುವ ಕುರಿತು ಚರ್ಚೆಯನ್ನು ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ತೆಗೆದುಕೊಳ್ಳಲಾಯಿತು. ಈ ವಿಷಯವನ್ನು ಕೌನ್ಸಿಲ್ ಮುಂದೆ ಚರ್ಚೆಗೆ ಇಡುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಅದಾಗ್ಯೂ, ಕೇಂದ್ರ ಮತ್ತು ರಾಜ್ಯಗಳು ಜಿಎಸ್‌ಟಿ ಆಡಳಿತದ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸೇರಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಫಲವಾಗಿವೆ.

                                      ಜೈವಿಕ ಡೀಸೆಲ್ ಮೇಲಿನ ತೆರಿಗೆ ಕಡಿತ:

            ಡೀಸೆಲ್‌ನೊಂದಿಗೆ ಬೆರೆಸುವ ಜೈವಿಕ ಡೀಸೆಲ್ ಮೇಲಿನ ಜಿಎಸ್‌ಟಿ ದರವನ್ನು (ತೈಲ ಮಾರುಕಟ್ಟೆ ಕಂಪನಿಗಳು ಬಳಸುವ) ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ರೈಲ್ವೆ ಬಿಡಿಭಾಗ, ಲೋಕೋಮೋಟಿವ್‌ಗಳ ಮೇಲಿನ ಜಿಎಸ್‌ಟಿಯನ್ನು ಪ್ರಸ್ತುತ ಶೇ.12 ರಿಂದ ಶೇ.18ಕ್ಕೆ ಹೆಚ್ಚಿಸಲು ಕೌನ್ಸಿಲ್ ಅನುಮೋದನೆ ನೀಡಿದೆ.

                             ಕೇರಳ ಹೈಕೋರ್ಟ್ ಸೂಚನೆಯಲ್ಲಿ ಏನಿತ್ತು?:

               ಭಾರತದಲ್ಲಿ ಇಂಧನ ಬೆಲೆ ಗಗನಮುಖಿಯಾಗಿ ಏರಿಕೆಯಾಗುತ್ತಿರುವುದರ ನಡುವೆ ಕಳೆದ ಜೂನ್ ತಿಂಗಳಿನಲ್ಲಿ ರಿಟ್ ಅರ್ಜಿಯೊಂದು ಕೇರಳದ ಉಚ್ಛ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವಂತೆ ಕೌನ್ಸಿಲ್ ಗೆ ಸೂಚನೆ ನೀಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries