ಬದಿಯಡ್ಕ: ಬಿಜೆಪಿ ಎಸ್‍ಸಿ ಮೋರ್ಚಾ ಕುಂಬ್ಡಾಜೆ ಪಂಚಾಯಿತಿ ಸಮಿತಿಯ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯಂದು ಸಾಮಾಜಿಕ, ಧಾರ್ಮಿಕ, ಸಾಂಸ್ಕøತಿಕ ಮುಂದಾಳು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಆಲ್ ಇಂಡಿಯಾ ಕಾನ್ಪಡರೇಶನ್ ಎಸ್.ಸಿ.ಎಸ್.ಟಿ. ಆರ್ಗನೈಸೇಶನ್‍ನ ಕಾಸರಗೋಡು ಜಿಲ್ಲಾ ಅಧ್ಯಕ್ಷ ರಾಮಪ್ಪ ಮಂಜೇಶ್ವರ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಲಾಯಿತು. ಎಸ್‍ಸಿ ಮೋರ್ಚಾದ ಪಂಚಾಯಿತಿ ಸಮಿತಿ ಅಧ್ಯಕ್ಷ ಸುರೇಶ್ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ವಿಷ್ಣುಪ್ರಸಾದ ಮಾಚಾವು ಶಾಲು ಹೊದಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಎಸ್ ಸಿ ಮೋರ್ಚಾ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಸುಂದರ ಕೆ ಮವ್ವಾರ್ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿ ಕೊರಗಪ್ಪ ಬೆಳ್ಳಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಬದಿಯಡ್ಕ ಗ್ರಾಮಪಂಚಾಯಿತಿ ಸದಸ್ಯ ಶಂಕರ ದರ್ಬೆತಡ್ಕ ಫಲಪುಷ್ಪ ನೀಡಿದರು. ಎಸ್‍ಸಿ ಮೋರ್ಚಾ ಕುಂಬ್ಡಾಜೆ ಪಂಚಾಯಿತಿ ಸಮಿತಿ ಕಾರ್ಯದರ್ಶಿ ರಘು ಮಾಚಾವು ಸ್ಮರಣಿಕೆಯನ್ನು ನೀಡಿದರು. ಸತೀಶ್ ಮಾಚಾವು ವಂದಿಸಿದರು.





