ಕೊಚ್ಚಿ: ವಿದ್ಯಾರ್ಥಿ ಪೋಲೀಸ್ ಕೆಡೆಟ್ ಸಮವಸ್ತ್ರ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿಯ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ. ವಿದ್ಯಾರ್ಥಿಯು ತನ್ನ ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ಸಮವಸ್ತ್ರವನ್ನು ಧರಿಸಲು ಮತ್ತು ತನ್ನ ಕೈಗಳನ್ನು ಸಂಪೂರ್ಣವಾಗಿ ಮುಚ್ಚುವಂತಹ ಬಟ್ಟೆಗಳನ್ನು ಧರಿಸಲು ಅನುಮತಿಸಬೇಕೆಂದು ಒತ್ತಾಯಿಸಿ ಕೋರ್ಟ್ ಮೆಟ್ಟಲೇರಿದ್ದಳು.
ಕುಟ್ಟಾಡಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ರಿಜಾ ನಹಾನ್ ಅರ್ಜಿಯೊಂದಿಗೆ ನ್ಯಾಯಾಲಯವನ್ನು ಸಂಪರ್ಕಿಸಿದರು. ಆದರೆ, ನ್ಯಾಯಮೂರ್ತಿ ಪಿವಿ ಕುಂಞÂ್ಞ ಕೃಷ್ಣನ್ ಅವರು ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದರು.
ವಿದ್ಯಾರ್ಥಿ ಪೋಲೀಸ್ ಕೆಡೆಟ್ ಸಮವಸ್ತ್ರವನ್ನು ಕೇರಳ ಪೋಲೀಸರ ಮಾದರಿಯಲ್ಲಿ ಮಾಡಲಾಗಿದೆ ಮತ್ತು ಆದ್ದರಿಂದ ಧಾರ್ಮಿಕ ನೆಲೆಯಲ್ಲಿ ಧರಿಸಲು ಅನುಮತಿಸಲು ಸಾಧ್ಯವಿಲ್ಲ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಸರ್ಕಾರವು ಪೋಲೀಸ್ ಪಡೆಗೆ ಸಾಮಾನ್ಯ ಸಮವಸ್ತ್ರವನ್ನು ಹೊಂದಿದೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ಅರ್ಜಿದಾರರು ಸರ್ಕಾರವನ್ನು ಸಂಪರ್ಕಿಸಬಹುದು ಎಂದು ನ್ಯಾಯಾಲಯ ತೀರ್ಪು ನೀಡಿದೆ.





