ಕಾಸರಗೋಡು: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಸೇವಾ ಹಿ ಸಮರ್ಪಣ್ ಅಭಿಯಾನಕ್ಕೆ ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಕೆ. ಸುರೇಂದ್ರನ್ ಗುರುವಾರ ಚಾಲನೆ ನೀಡಿದರು.
ಅಕ್ಟೋಬರ್ 7ರ ವರೆಗೆ ಜಿಲ್ಲೆಯ ನಾನಾ ಕಡೆ ನಡೆಯಲಿರುವ ಸೇವಾ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಳ್ಳಲಿದ್ದು, ಈ ಬಗ್ಗೆ ಕಾರ್ಯಯೋಜನೆ ತಯಾರಿಸಲಾಯಿತು. ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ಕೆ. ಶ್ರೀಕಾಂತ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಪಿ.ರಘುನಾಥ್, ಕೆ.ಪಿ ಸುರೇಶ್, ಎಂ. ಸಂಜೀವ ಶೆಟ್ಟಿ, ಪ್ರಮಿಳಾ ಸಿ. ನಾಯ್ಕ್, ಅಶ್ವಿನಿ ಎಂ.ಎಲ್, ಎ.ವೇಲಾಯುಧನ್, ಸುಧಾಮ ಗೋಸಾಡ ಉಪಸ್ಥಿತರಿದ್ದರು.





