ಬದಿಯಡ್ಕ: ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರ ಆರಾಧನೋತ್ಸವ ಹಾಗೂ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪ್ರಥಮ ಚಾತುರ್ಮಾಸ್ಯ ವ್ರತಾಚಾರಣೆಯ ಅಂಗವಾಗಿ ಶ|ರೀಮದ್ ಎಡನೀರು ಮಠದಲ್ಲಿ ನಡೆಯುತ್ತಿರುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವೈಷ್ಣವೀ ನಾಟ್ಯಾಲಯ ಪುತ್ತೂರು ಇದರ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ "ನೃತ್ಯಾರ್ಪಣಂ " ಎಡನೀರು ಶ್ರೀಮಠದ ವೇದಿಕೆಯಲ್ಲಿ ಇತ್ತೀಚೆಗೆ ನೆರವೇರಿತು.
ಕಾರ್ಯಕ್ರಮವನ್ನು ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳವರು ದೀಪ ಬೆಳಗಿಸಿ ಉದ್ಘಾಟಿಸಿದರು. ಹಿಮ್ಮೇಳದಲ್ಲಿ ವೈಷ್ಣವೀ ನಾಟ್ಯಲಯದ ನಿರ್ದೇಶಕಿ ನಾಟ್ಯಗುರು ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಪುತ್ತೂರು, ಹಾಡುಗಾರಿಕೆಯಲ್ಲಿ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ಸಂಗೀತ ವಿದ್ವಾನ್ ವೆಳ್ಳಿಕ್ಕೋತ್ ವಿಷ್ಣು ಭಟ್ ಹಾಗೂ ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ಜಿತೇಶ್ ಕುಮಾರ್ ನೀಲೇಶ್ವರ , ಕೊಳಲಿನಲ್ಲಿ ರಾಜಗೋಪಾಲ್ ಕಾಞಂಗಾಡ್ ಸಹಕರಿಸಿದರು.







