ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಉಗ್ರರು ಹಾಗೂ ಭದ್ರತಾ ಪಡೆ ನಡೆದ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಶನಿವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 24 ಗಂಟೆಗಳಲ್ಲಿ ಶ್ರೀ ನಗರದಲ್ಲಿ 5 ಉಗ್ರರ ಪೈಕಿ ಮೂವರನ್ನು ಹತ್ಯೆ ಮಾಡಲಾಗಿದೆ. ನಾಗರಿಕರ ಹತ್ಯೆ ಬಳಿಕ ಒಂಬತ್ತು ಎನ್ ಕೌಂಟರ್ ಗಳಲ್ಲಿ 13 ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿಸಿದರು.
ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿನ ನಾಗರಿಕರ ಹತ್ಯೆ ಬಳಿಕ ಭದ್ರತಾ ಪಡೆಗಳಿಂದ ನಡೆದ ಎಂಟು ಎನ್ ಕೌಂಟರ್ ಗಳಲ್ಲಿ ಒಟ್ಟು 11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಶುಕ್ರವಾರ ತಿಳಿಸಿದ್ದರು. ಕಣಿವೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಅನೇಕ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದಾರೆ.




