HEALTH TIPS

ಬಡ ದೇಶಗಳಿಗೆ ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆ ಕರೆಯೊಂದಿಗೆ ಜಿ-20 ಶೃಂಗಸಭೆ ಆರಂಭ

                  ರೋಮ್: ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ ಅವರು ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆಯುವಂತಾಗಬೇಕು ಎಂದು ಕರೆ ನೀಡುವ ಮೂಲಕ ವಿಶ್ವದ ಶಕ್ತಿಶಾಲಿ ಆರ್ಥಿಕತೆ ಸಮ್ಮೇಳನ ಜಿ-20 ಶೃಂಗಸಭೆಗೆ ಚಾಲನೆ ನೀಡಿದರು.

                    ಜಾಗತಿಕವಾಗಿ ಕೋವಿಡ್ ಲಸಿಕೆ ಅಂತರ "ನೈತಿಕವಾಗಿ ಸ್ವೀಕಾರಾರ್ಹವಲ್ಲ" ಎಂದಿರುವ ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ. 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ. ಆದರೆ ಶ್ರೀಮಂತ ರಾಷ್ಟ್ರಗಳಲ್ಲಿ ಶೇ. 70 ಜನ ಕನಿಷ್ಠ ಒಂದು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

              ಕಡಿಮೆ-ಆದಾಯದ ದೇಶಗಳಿಗೆ ಹೆಚ್ಚಿನ ಲಸಿಕೆ ಪೂರೈಸಲು ಸಾಮೂಹಿಕ ಸಹಾಯಕ್ಕಾಗಿ ಶೃಂಗಸಭೆಯ ಮೂಲಕ ಡ್ರಾಗಿ ಕರೆ ನೀಡಿದರು. ಡ್ರಾಗಿ ಅವರು ರೋಮ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ- 20 ಶೃಂಗಸಭೆಯ ಆತಿಥ್ಯ ವಹಿಸಿದ್ದಾರೆ.


            ಶೃಂಗಸಭೆಯಲ್ಲಿ ಹವಾಮಾನ ಬದಲಾವಣೆ, ಜಾಗತಿಕ ಕನಿಷ್ಠ ಕಾರ್ಪೋರೇಟ್ ತೆರಿಗೆ ದರ, ಕೊವಿಡ್​ 19 ಸಾಂಕ್ರಾಮಿಕದಿಂದ ಆರೋಗ್ಯದಲ್ಲಿ ಚೇತರಿಕೆ, ಜಾಗತಿಕ ಅಭಿವೃದ್ಧಿ ಇತ್ಯಾದಿ ವಿಚಾರಗಳನ್ನು ಇಂದು ನಾಯಕರು ವ್ಯಾಪಕವಾಗಿ ಚರ್ಚಿಸಲಿದ್ದಾರೆ. 

           ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಜಿ-20 ನಾಯಕರ ಫೋಟೋವನ್ನು ಶೇರ್ ಮಾಡಿಕೊಂಡಿದೆ. ಜಾಗತಿಕ ಒಳಿತಿಗಾಗಿ ಇರುವ ಅತಿಮುಖ್ಯವಾದ ವೇದಿಕೆಯಾದ ಜಿ-20 ಸಂಘಟನೆಯ ನಾಯಕರು ಇಂದು ರೋಮ್​​ನಲ್ಲಿ ಭೇಟಿಯಾದರು ಎಂದು ಹೇಳಿದೆ. ಈ ಫೋಟೋದಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್, ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಯುಕೆ ಪಿಎಂ ಬೋರಿಸ್ ಜಾನ್ಸನ್ ಇತರ ಪ್ರಮುಖ ನಾಯಕರು ಇದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries