HEALTH TIPS

ಮಾಜಿ ಲೈಂಗಿಕ ಕಾರ್ಯಕರ್ತೆಗೆ ಒಲಿದ ಚಲನಚಿತ್ರ ಪ್ರಶಸ್ತಿ..!

               ತಿರುವಂತನಪುರಂ: ಹೊಟ್ಟೆಪಾಡಿಗಾಗಿ ಲೈಂಗಿಕ ಕಾರ್ಯಕರ್ತೆಯಾಗಿ ದುಡಿಯುತ್ತಿದ್ದ ಸಂದರ್ಭದಲ್ಲಿ ಅನುಭವಿಸಿದ ಕಥೆ-ವ್ಯಥೆಗಳನ್ನು ಬರಹ ರೂಪಕ್ಕೆ ಇಳಿಸಿ ಮನೆಮಾತಾಗಿರುವ ನಳಿನಿ ಜಮೀಲ ಅವರಿಗೆ ಕೇರಳದ ಪ್ರತಿಷ್ಠಿತ ಚಲನಚಿತ್ರ ಪ್ರಶಸ್ತಿ ಒಲಿದು ಬಂದಿದೆ.

             69 ವರ್ಷದ ನಳಿನಿ ಅವರು ತಮ್ಮ ಯೌವನದಲ್ಲಿ ಹೊಟ್ಟೆಪಾಡಿಗಾಗಿ ಲೈಂಗಿಕ ಕಾರ್ಯಕರ್ತೆಯಾಗಿದ್ದ ಸಂದರ್ಭದಲ್ಲಿ ತಾವು ಎದುರಿಸಿದ್ದ ನೋವು-ನಲಿವುಗಳನ್ನು ಪುಸ್ತಕ ರೂಪದಲ್ಲಿ ಹೊರ ತಂದು ಮನೆ ಮಾತಾಗಿದ್ದರು.

              ಮಣಿಲಾಲ್ ನಿರ್ದೇಶನದ ಭರತ್‍ಪುಳ ಚಿತ್ರದಲ್ಲಿ ವಸ್ತ್ರವಿನ್ಯಾಸಕಿಯಾಗಿದ್ದ ನಳಿನಿ ಅವರನ್ನು ಕೇರಳ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
                ಲೈಂಗಿಕ ಕಾರ್ಯಕರ್ತೆಯಾಗಿ ನಾನು ಅನುಭವಿಸಿದ ನೋವು ಅಷ್ಟಿಷ್ಟಲ್ಲ. ಇದರ ಮಧ್ಯೆ ನನಗೆ ಚಲನಚಿತ್ರ ಪ್ರಶಸ್ತಿ ಬರಲಿದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದು ನನ್ನ ಜೀವಮಾನದ ಸಾಧನೆ ಎಂದು ಹೆಮ್ಮೆಪಟ್ಟಿದ್ದಾರೆ ನಳಿನಿ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries