ತಿರುವನಂತಪುರಂ: ರಾಜ್ಯದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಡುಕ್ಕಿ, ಪತ್ತನಂತಿಟ್ಟ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾನುವಾರದವರೆಗೂ ಮಳೆ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 40 ಕಿಲೋಮೀಟರ್ ವರೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಕೊಟ್ಟಾಯಂನಲ್ಲಿಯೂ ಬೆಳಿಗ್ಗೆ ಭಾರೀ ಮಳೆಯಾಗಿದೆ. ಇತರ ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಿದೆ. ಆದರೆ ಮುಂದಿನ ದಿನಗಳಲ್ಲಿ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.
ಪಾಲಕ್ಕಾಡ್: ಭಾರೀ ಮಳೆಯಿಂದಾಗಿ ನಾಲ್ಕು ಸ್ಥಳಗಳಲ್ಲಿ ಭೂಕುಸಿತ ಉಂಟಾಗಿದೆ. ಪಾಡಂಗಿಟ್ಟಂ, ವಿಆರ್‌ಟಿ ಕಾವಾ, ಪಾಲಕುಝಿಯ ಕಲ್ಕುಝಿ ಮತ್ತು ವಿಲಂಗನಪಾರದಲ್ಲಿ ಭೂಕುಸಿತ ಸಂಭವಿಸಿದೆ. ಎಪ್ಪತ್ತು ಕುಟುಂಬಗಳನ್ನು ಇಲ್ಲಿಂದ ಸ್ಥಳಾಂತರಿಸಲಾಗಿದೆ. ಮಲಪ್ಪುರಂನ ಹಲವು ಮನೆಗಳಿಗೆ ನೀರು ನುಗ್ಗಿದೆ.
ಇದೇ ವೇಳೆ, ಮಳೆಯ ಸವಾಲುಗಳಿಂದ ಪಾರಾಗಲು ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬ ಆರೋಪಗಳಿವೆ. ಈ ಮೊದಲು ಕೇರಳದಲ್ಲಿ ಭಾರೀ ಮಳೆಯಾಗುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಈ ಕುರಿತು ವಿಪತ್ತು ನಿರ್ವಹಣಾ ಪ್ರಾಧಿಕಾರವು ವರದಿಯನ್ನೂ ಬಿಡುಗಡೆ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕ್ಯೆಗೊಂಡಿಲ್ಲ ಎಂದು ಆರೋಪಿಸಲಾಗಿದೆ.




