ಕಾಸರಗೋಡು: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಬಸಿ ಸಹಿತ ವಿವಿಧೆಡೆ ಅಪಾಯಕಾರಿಯಾಗಿ ಕಂಡುಬರುವ ಮರಗಳನ್ನು ಕಡಿದು ತೆರವುಗೊಳಿಸಲು ತುರ್ತು ಕ್ರಮಕೈಗೊಳ್ಳಲು ತೀರ್ಮಾನಿಸಲಾಗಿದೆ. ಪಂಚಾಯತ್ ಅಧ್ಯಕ್ಷರುಗಳ ಬೇಡಿಕೆ ಪ್ರಕಾರ ಈ ಕ್ರಮ ಜಾರಿಗೊಳ್ಳಲಿದೆ. ಅರಣ್ಯ ಇಲಾಖೆ, ಅಗ್ನಿಶಾಮಕದಳ ಗಳಿಗೆ ಈ ಸಂಬಂಧ ಆದೇಶ ನೀಡಲಾಗಿದೆ.
ಪಂಚಾಯತ್ ಅಧ್ಯಕ್ಷರ ಮತ್ತು ಜಿಲ್ಲಾ ಮಟ್ಟದ ಸಿಬ್ಬಂದಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ನ್ಯಾಯಮೂರ್ತಿಗಳೂ ಆಗಿರುವ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಅಧ್ಯಕ್ಷತೆ ವಹಿಸಿದ್ದರು.
ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳು ಈ ನಿಟ್ಟಿನಲ್ಲಿ ಸಹಕಾರ ನೀಡುವಂತೆ ಕೋರಲಾಗಿದೆ. ವಿಳಂಬವಿಲ್ಲದೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರ ನಿಡುವುದಾಗಿ ಸ್ಥಳೀಯಾಡಳಿತೆ ಸಂಸ್ಥೆಗಳ ಪ್ರತಿನಿಧಿಗಳು ಭರವಸೆ ನೀಡಿದರು.




