ತಿರುವನಂತಪುರಂ: ಸೋಮವಾರ ನಡೆಯಬೇಕಿದ್ದ ಮೆಡಿಕಲ್ ಯುನಿವರ್ಸಿಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ಹೇಳಿದ್ದಾರೆ.
ಪರಿಷ್ಕøತ ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ, ಸೋಮವಾರ(ಇಂದು) ನಡೆಯಬೇಕಿದ್ದ ಪ್ಲಸ್ ಒನ್ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಶಿಕ್ಷಣ ಸಂಸ್ಥೆಗಳ ಆರಂಭವನ್ನು ಮುಂದೂಡಲಾಗಿದೆ. ಅಕ್ಟೋಬರ್ 18 ರಂದು ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿತ್ತು. ಆದರೆ ಇದನ್ನು ಅಕ್ಟೋಬರ್ 20 ಕ್ಕೆ ವಿಸ್ತರಿಸಲಾಗಿದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

