HEALTH TIPS

ಸೆಮಿಕಂಡಕ್ಟರ್ ಉದ್ಯಮಕ್ಕೆ ಅಗತ್ಯ ನೀತಿ: ಸಚಿವ ರಾಜೀವ್ ಚಂದ್ರಶೇಖರ್

               ಬೆಂಗಳೂರು: 'ಎಲೆಕ್ಟ್ರಾನಿಕ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ನಾಯಕನ ಸ್ಥಾನಕ್ಕೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಸೆಮಿಕಂಡಕ್ಟರ್ ತಯಾರಿಕಾ ಕಂಪನಿಗಳಿಗೆ ಹಾಗೂ ನವೋದ್ಯಮಗಳಿಗೆ ಅಗತ್ಯವಿರುವ ನೀತಿಗಳನ್ನು ರೂಪಿಸಲಾಗುತ್ತದೆ' ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಉದ್ಯಮಿಗಳಿಗೆ ಭರವಸೆ ನೀಡಿದರು.

           ಇಲ್ಲಿನ ಸಿ-ಡಾಕ್ ಕಚೇರಿಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಹಾಗೂ ನವೋದ್ಯಮಗಳ ಪ್ರತಿನಿಧಿಗಳ ಜೊತೆ ಸೋಮವಾರ ಸಂವಾದ ನಡೆಸಿದ ಸಚಿವರು, ನೀತಿಯಲ್ಲಿ ಯಾವ ಅಂಶಗಳನ್ನು ಅಳವಡಿಸಿಕೊಳ್ಳಬಹುದು ಎಂಬ ಬಗ್ಗೆ ಸಲಹೆ ನೀಡುವಂತೆ ಕೋರಿದರು.

            ಸಿ-ಡಾಕ್ ಕೇಂದ್ರವು ಇಂಟರ್ನೆಟ್ ಆಫ್ ಥಿಂಗ್ಸ್‌ ಅಭಿವೃದ್ಧಿಗಾಗಿ ಸಿದ್ಧಪಡಿಸಿರುವ ಇಂಡಸ್ ಕಿಟ್‌ಗೆ ಚಾಲನೆ ನೀಡಿದರು. ಡ್ರೋನ್ ಸೇರಿದಂತೆ ಹಲವು ಸಾಧನಗಳಲ್ಲಿ ಈ ಕಿಟ್ ಬಳಕೆ ಮಾಡಬಹುದು ಎಂದು ಪ್ರಕಟಣೆ ಹೇಳಿದೆ. ಈ ಕಿಟ್‌ನ ತಂತ್ರಜ್ಞಾನವನ್ನು ನವೋದ್ಯಮಗಳಿಗೆ ನೀಡಿ, ಇದರ ವಾಣಿಜ್ಯಿಕ ಉತ್ಪಾದನೆಗೆ ಅವಕಾಶ ಕಲ್ಪಿಸಲು ಸಿ-ಡಾಕ್ ಸಿದ್ಧವಿದೆ.

           ಇಂಟೆಲ್ ಕಂಪನಿಯ ಉಪಾಧ್ಯಕ್ಷ ಶ್ರೀನಿವಾಸಲಿಂಗಂ, ಎನ್‌ಎಕ್ಸ್‌ಪಿ ಸೆಮಿಕಂಡಕ್ಟರ್ಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಗುಪ್ತ ಸೇರಿದಂತೆ ಉದ್ಯಮದ ಹಲವು ಪ್ರತಿನಿಧಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries