HEALTH TIPS

ಜಮ್ಮು ಕಾಶ್ಮೀರ: ಮೊದಲು ಗಡಿ ನಿರ್ಣಯ, ನಂತರ ರಾಜ್ಯ ಸ್ಥಾನಮಾನ: ಅಮಿತ್ ಶಾ

              ಶ್ರೀನಗರಶನಿವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಗಡಿ ನಿರ್ಣಯ(ಡಿಲಿಮಿಟೇಷನ್) ಹಾಗೂ ವಿಧಾನಸಭಾ ಚುನಾವಣೆ ಬಳಿಕ ಪುನರ್ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

           370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಅವರು ಶ್ರೀನಗರದ ಯುವ ಸಂಘಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

             ಗಡಿ ನಿರ್ಣಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಡಿ ನಿರ್ಣಯ ಆಗಿಯೇ ತೀರುತ್ತದೆ. ಆದರೆ ಚುನಾವಣೆ ಬಳಿಕ. ಆಗಲೇ ಕಾಶ್ಮೀರದ ರಾಜ್ಯ ಸ್ಥಾನಮಾನವನ್ನೂ ಪುನರ್ ಸ್ಥಾಪಿಸಲಾಗುವುದು. ಇದರಿಂದಾಗಿ ರಾಜ್ಯದ ಯುವ ಪೀಳಿಗೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ. ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ.

          ತಮ್ಮ ಭಾಷಣದ ನಡುವೆ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತಡೆಗಟ್ಟಲು ಸಾಧ್ಯವಿಲ್ಲ.ರಾಜ್ಯದಲ್ಲಿ ಶಾಂತಿ ಕದಡಲು ಯಾರಾದರೂ ಯತ್ನಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries