ಕಾಸರಗೋಡು: ಎಸ್ ಸಿ ಮೋರ್ಚಾ ಜಿಲ್ಲಾ ಸಮಿತಿಯ ವತಿಯಿಂದ ಪಕ್ಷದ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ದಿನಾಚರಣೆಯು ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಸಂಪತ್ ಪೆರ್ಣಡ್ಕರ ಅಧ್ಯಕ್ಷತೆಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಕೆ ಕಯ್ಯಾರ್, ಬಿಜೆಪಿ ಕಾಸರಗೋಡು ಮಂಡಲ ಪ್ರಧಾನ ಕಾರ್ಯದರ್ಶಿ ಸುಕುಮಾರ ಕುದ್ರೆಪ್ಪಾಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಮಪ್ಪ ಮಂಜೇಶ್ವರ, ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್ ಶುಭಶಂಸನೆಗೈದರು.
ಹರಿಶ್ಚಂದ್ರ ಪುತ್ತಿಗೆ, ಸೌದಾಮಿನಿ, ಸುರೇಶ್ ಮಜಲ್ ಮಾತನಾಡಿದರು. ಎಸ್ ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ ಪೆರಡಾಲ ಸ್ವಾಗತಿಸಿ , ಕಾರ್ಯದರ್ಶಿ ಶಶಿ ಅರಿಯಪ್ಪಾಡಿ ವಂದಿಸಿದರು.




