HEALTH TIPS

ದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು

              ಚೆನ್ನೈ: ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು ರಾಜಭವನ ತಿಳಿಸಿದೆ.

          "ಇತ್ತೀಚೆಗೆ ಕೆಲವು ದುಷ್ಕರ್ಮಿಗಳು ಗೌರವಾನ್ವಿತ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇಮೇಲ್ ಖಾತೆಗಳನ್ನು ಸೃಷ್ಟಿಸಿ ಆಕ್ಷೇಪಾರ್ಹ ವಿಷಯಗಳೊಂದಿಗೆ ಇ-ಮೇಲ್‌ಗಳನ್ನು ಕಳುಹಿಸುತ್ತಿದ್ದಾರೆ" ಎಂದು ರಾಜಭವನದ ಅಧಿಕೃತ ಪ್ರಕಟಣೆ ಹೇಳಿದೆ.

          ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

           "ರಾಜಭವನದ ಅಧಿಕೃತ ಇ-ಮೇಲ್ govtam@nic.in ಮತ್ತು ಅಧಿಕೃತ ಟ್ವಿಟರ್ ಖಾತೆ @rajbhavan_tn"ಆಗಿದ್ದು, ರಾಜಭವನದ ಅಧಿಕೃತ ಇ-ಮೇಲ್ ಅಥವಾ ಟ್ವಿಟರ್ ಖಾತೆಗಳನ್ನು ಹೊರತುಪಡಿಸಿ ಯಾವುದೇ ಖಾತೆಗಳನ್ನು ನಂಬಬೇಡಿ ಎಂದು ತಮಿಳುನಾಡು ರಾಜ್ಯಪಾಲರ ಕಚೇರಿ ಜನರಲ್ಲಿ ಮನವಿ ಮಾಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries