ಮಧೂರು: ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ ವಿಂಶತಿ ವರ್ಷಾಚರಣೆಯ ಅಂಗವಾಗಿ ಸಾಮಾಜಿಕ, ಸಾಂಸ್ಕøತಿಕ, ಧಾರ್ಮಿಕ, ರಂಗಭೂಮಿ, ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡ ಹಿರಿಯ ಹವ್ಯಾಸಿ ಪತ್ರಕರ್ತ ನಿವೃತ್ತ ಉಪ ಜಿಲ್ಲಾಧಿಕಾರಿ ಬಿ.ಬಾಲಕೃಷ್ಣ ಅಗ್ಗಿತ್ತಾಯ ದಂಪತಿಗಳಿಗೆ ಅವರ ಮಧೂರು ಉಳಿಯದ ಸ್ವಗೃಹದಲ್ಲಿ ಗುರುನಮನ ಸಲ್ಲಿಸಲಾಯಿತು.
ನಿವೃತ್ತ ಅಧ್ಯಾಪಕ ವಿಶಾಲಾಕ್ಷ ಪುತ್ರಕಳ ಅವರು ಬಿ.ಬಾಲಕೃಷ್ಣ ಅಗ್ಗಿತ್ತಾಯ ಅವರು ವಿವಿಧ ಕ್ಷೇತ್ರಗಳಿಗೆ ಸಲ್ಲಿಸಿದ ಕೊಡುಗೆಯನ್ನು ಸವಿಸ್ತಾರವಾಗಿ ವಿವರಿಸಿದರು.
ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಕೆ.ವಾಮನ ರಾವ್ ಬೇಕಲ್ ಮತ್ತು ಕೋಶಾಧಿಕಾರಿ ಸಂಧ್ಯಾರಾಣಿ ಅವರು ಬಿ.ಬಾಲಕೃಷ್ಣ ಅಗ್ಗಿತ್ತಾಯ ದಂಪತಿಯನ್ನು ಗೌರವಿಸಿ, ಗುರುನಮನ ಸಲ್ಲಿಸಿದರು. ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ನಿವೃತ್ತ ಅಧ್ಯಾಪಕ ವಿ.ಬಿ.ಕುಳಮರ್ವ ಅಭಿನಂದನಾ ಭಾಷಣ ಮಾಡಿದರು. ಪತ್ರಕರ್ತರಾದ ಪ್ರದೀಪ್ ಬೇಕಲ್, ಜಗನ್ನಾಥ, ವಸಂತ ಕೆರೆಮನೆ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಭವನ ಗ್ರಂಥಾಲಯದ ಪ್ರಧಾನ ಕಾರ್ಯದರ್ಶಿ ಕೆ.ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಕಾರ್ತಿಕ್ ಕಾಸರಗೋಡು ವಂದಿಸಿದರು.




