HEALTH TIPS

ಮಾನವ ಹಕ್ಕುಗಳ ಬಗ್ಗೆ ಕೆಲವರ 'ಆಯ್ದ ವ್ಯಾಖ್ಯಾನ'ದಿಂದ ಭಾರತದ ವ್ಯಕ್ತಿತ್ವಕ್ಕೆ ಧಕ್ಕೆ: ಪ್ರಧಾನಿ ಮೋದಿ

            ನವದೆಹಲಿದೇಶದಲ್ಲಿ ಮಾನವ ಹಕ್ಕುಗಳ ಬಗ್ಗೆ ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡುವವರ ವಿರುದ್ಧ ಕಿಡಿಕಾರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನೋಡುವುದು ಮಾನವ ಹಕ್ಕುಗಳಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಬಣ್ಣಿಸಿದ್ದಾರೆ.

          ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್ ಎಚ್ ಆರ್ ಸಿ) 28ನೇ ಸಂಸ್ಥಾಪನಾ ದಿನದ ಅಂಗವಾಗಿ ಮಾತನಾಡಿದ ಪ್ರಧಾನಿ ಮೋದಿ, ಮಾನವ ಹಕ್ಕುಗಳ ವಿಚಾರ ಬಂದಾಗ ತಮ್ಮ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ನೋಡುವವರು ಮಾನವ ಹಕ್ಕುಗಳನ್ನು ವಿಭಿನ್ನವಾಗಿ ನೋಡುತ್ತಾರೆ ಎಂದರು.

          ಮಾನವ ಹಕ್ಕುಗಳ ಉಲ್ಲಂಘನೆಯ ಹೆಸರಿನಲ್ಲಿ ಕೆಲವರು ದೇಶದ ಪ್ರತಿಷ್ಠೆಯನ್ನು ಕುಗ್ಗಿಸಲು ಪ್ರಯತ್ನಿಸುತ್ತಾರೆ, ಜನರು ಅಂಥವರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸಹ ಹೇಳಿದರು.

ಇಲ್ಲಿ ಪ್ರಧಾನಿ ಮೋದಿಯವರು ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ಹೆಸರಿಸದಿದ್ದರೂ, ಆಡಳಿತಾರೂಢ ಬಿಜೆಪಿ ಮಾನವ ಹಕ್ಕುಗಳ ಸಂಘಟನೆಯ ಒಂದು ಗುಂಪನ್ನು ಟೀಕಿಸುತ್ತಾ ಬಂದಿದೆ. ಮಾನವ ಸಂಪನ್ಮೂಲ ಉಲ್ಲಂಘನೆಯ ಪ್ರಕರಣಗಳನ್ನು ಆಯ್ದವಾಗಿ ಮತ್ತು ಏಕಪಕ್ಷೀಯವಾಗಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಬರುತ್ತಿರುವ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಸಂಘನೆಗಳು ಕೂಡ ಸೇರಿವೆ.

             ತಮ್ಮ ಭಾಷಣದಲ್ಲಿ ಪ್ರಧಾನ ಮಂತ್ರಿಗಳು, ಬಡವರಿಗೆ ಶೌಚಾಲಯ, ಅಡುಗೆ ಅನಿಲ, ವಿದ್ಯುತ್ ಮತ್ತು ವಸತಿಯಂತಹ ಮೂಲಭೂತ ಅಗತ್ಯಗಳನ್ನು ತಲುಪಿಸಲು ತಮ್ಮ ಸರ್ಕಾರ ತೆಗೆದುಕೊಂಡ ಹಲವಾರು ಕ್ರಮಗಳನ್ನು ಉಲ್ಲೇಖಿಸಿದರು.ಇದು ಬಡ ಮತ್ತು ನಿರ್ಗತಿಕರಲ್ಲಿ ಆಕಾಂಕ್ಷೆಗಳನ್ನು ಹುಟ್ಟುಹಾಕುವುದಲ್ಲದೆ ಮತ್ತು ಅವರ ಹಕ್ಕುಗಳ ಬಗ್ಗೆ ಹೆಚ್ಚು ಅರಿವು ಮೂಡಿಸುತ್ತದೆ ಎಂದು ಹೇಳಿದರು.

         ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡುವ ಮೂಲಕ ತಮ್ಮ ಸರ್ಕಾರ ಮುಸಲ್ಮಾನ ಮಹಿಳೆಯರಿಗೆ ಹೊಸ ಹಕ್ಕುಗಳನ್ನು ನೀಡಿದೆ ಎಂದು ಪ್ರಧಾನಿ ಹೇಳಿದರು. ಮಹಿಳೆಯರಿಗೆ 26 ವಾರಗಳ ಹೆರಿಗೆ ರಜೆ ಮತ್ತು ಅತ್ಯಾಚಾರದಂತಹ ಪ್ರಕರಣಗಳಿಗೆ ಹೆಚ್ಚು ಕಠಿಣ ಕಾನೂನು ಕ್ರಮಗಳನ್ನು ತರುವ ಮೂಲಕ ಮಹಿಳಾ ಸಬಲೀಕರಣಗೊಳಿಸಬಹುದು ಎಂದಿದ್ದಾರೆ.

          ಮಾನವ ಹಕ್ಕುಗಳ ಸಂರಕ್ಷಣೆ ಕಾಯಿದೆ, 1993 ರ ಅಡಿಯಲ್ಲಿ, ಅಕ್ಟೋಬರ್ 12, 1993 ರಂದು ಮಾನವ ಹಕ್ಕುಗಳ ಪ್ರಚಾರ ಮತ್ತು ರಕ್ಷಣೆಗಾಗಿ ಆಯೋಗವನ್ನು ಸ್ಥಾಪಿಸಲಾಯಿತು. ಎನ್‌ಎಚ್‌ಆರ್‌ಸಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಗುರುತಿಸುತ್ತದೆ, ವಿಚಾರಣೆಗಳನ್ನು ನಡೆಸುತ್ತದೆ ಮತ್ತು ತಪ್ಪಿತಸ್ಥ ಸಾರ್ವಜನಿಕ ಸೇವಕರ ವಿರುದ್ಧ ಪರಿಹಾರ ಮತ್ತು ಕಾನೂನು ಕ್ರಮಗಳ ಜೊತೆಗೆ ಸಾರ್ವಜನಿಕ ಅಧಿಕಾರಿಗಳಿಂದ ಸಂತ್ರಸ್ತರಿಗೆ ಪರಿಹಾರವನ್ನು ಶಿಫಾರಸು ಮಾಡುತ್ತದೆ.

ಸ್ವಾತಂತ್ರ್ಯ ಹೋರಾಟ ಮತ್ತು ಭಾರತದ ಇತಿಹಾಸವು ಮಾನವ ಹಕ್ಕುಗಳಿಗೆ ಸ್ಫೂರ್ತಿ ಮತ್ತು ಮೌಲ್ಯಗಳ ದೊಡ್ಡ ಮೂಲವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries