ತಿರುವನಂತಪುರಂ: ಶಾಲೆಯ ಆರಂಭಕ್ಕೆ ಸಂಬಂಧಿಸಿದಂತೆ ಅಂತಿಮ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಶಿಕ್ಷಣ ಮತ್ತು ಆರೋಗ್ಯ ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದರು. ಬ್ಯಾಕ್ ಟು ಸ್ಕೂಲ್ ಶೀರ್ಷಿಕೆಯ ಈ ಮಾರ್ಗಸೂಚಿಯಲ್ಲಿ ಎಂಟು ವಿಭಾಗಗಳಿವೆ.
ಉನ್ನತ ಮಟ್ಟದ ಸಭೆಯಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ಆರೋಗ್ಯ ಇಲಾಖೆಯ ವಿಶೇಷ ಕಾರ್ಯದರ್ಶಿ, ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು ಭಾಗವಹಿಸಿದ್ದರು. ನಾಲ್ಕು ಸದಸ್ಯರ ಸಮಿತಿಯ ನೇತೃತ್ವದಲ್ಲಿ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.
ಶಾಲಾರಂಭದ ಬಳಿಕ ಮೊದಲ ಎರಡು ವಾರಗಳಲ್ಲಿ, ತರಗತಿಗಳು ಮಕ್ಕಳಿಗೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾತ್ರ ಇರಲಿದೆ. ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ, ಪ್ರತಿ ಶನಿವಾರ ಕಾರ್ಯನಿರ್ವಹಿಸಲಿದೆ. ವಿಶೇಷ ಚೇತನ ವಿದ್ಯಾರ್ಥಿಗಳು ಶಾಲೆಗೆ ಬರಬೇಕಾಗಿಲ್ಲ. ಎಲ್ಲಾ ಶಿಕ್ಷಕರು, ಶಿಕ್ಷಕೇತರರು ಮತ್ತು ಇತರೆ ಸಿಬ್ಬಂದಿಗಳು ಶಾಲೆ ಆರಂಭಗೊಳ್ಳುವ ಮುನ್ನ ಎರಡು ಡೋಸ್ ಲಸಿಕೆಯನ್ನು ಪಡೆದಿರುಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಗುಂಪು ಗುಂಪಾಗಿ ವಿದ್ಯಾರ್ಥಿಗಳು ಒಟ್ಟು ಸೇರದಂತೆ ವಿಶೇಷ ಕಾಳಜಿ ವಹಿಸಬೇಕು. ಶಿಕ್ಷಕರು ಶೌಚಾಲಯ ಮತ್ತು ಊಟದ ಜಾಗದಲ್ಲಿ ವಿದ್ಯಾರ್ಥಿಗಳು ಗುಂಪುಗೂಡದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಶಿವಂ ಕುಟ್ಟಿ ಹೇಳಿದರು.
ತರಗತಿಗಳನ್ನು ಬಯೋ-ಬಬಲ್ ಮಾದರಿಯಲ್ಲಿ ನಡೆಸಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕರೊನಾ ಬಳಿಕದ ಹೃದಯ ಕಾಯಿಲೆ ಇರುವವರು ಮತ್ತು ಮನೆಯಲ್ಲಿ ಯಾರಿಗಾದರೂ ಕೊರೋನಾ ಇದ್ದರೂ ಶಾಲೆಗೆ ಬರಬಾರದು. ಶಾಲೆಗಳು ರೋಗಲಕ್ಷಣದ ದಾಖಲಾತಿಗಳನ್ನು ಸ್ಥಾಪಿಸಬೇಕು. ರೋಗಲಕ್ಷಣಗಳನ್ನು ಹೊಂದಿರುವವರಿಗೆ ವೈದ್ಯರ ಸೇವೆಗಳನ್ನು ಖಾತ್ರಿಪಡಿಸಬೇಕು ಎಂದು ವೀಣಾ ಜಾರ್ಜ್ ಹೇಳಿದರು.




