HEALTH TIPS

ಅಜಾನೂರು ಗ್ರಾಮ ಪಂಚಾಯತ್ ನಲ್ಲಿ ಬಿದಿರು ದ್ವೀಪ ಯೋಜನೆ ಉದ್ಘಾಟನೆ

             ಕಾಸರಗೋಡು: ಅಜಾನೂರು ಗ್ರಾಮ ಪಂಚಾಯತ್ ನಲ್ಲಿ ಬಿದಿರು ದ್ವೀಪ ಯೋಜನೆ ಉದ್ಘಾಟನೆಗೊಂಡಿದೆ. 

                 ಮಕ್ಕಳಲ್ಲಿ ಪರಿಸರ ಸಂರಕ್ಷಣೆ, ತ್ಯಾಜ್ಯ ಸಂಸ್ಕರಣೆ ಇತ್ಯಾದಿಗಳ ಕುರಿತು ಜಾಗೃತಿಯುಂಟುಮಾಡುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳ್ಳುತ್ತಿದೆ. ಹರಿತ ಕೇರಳಂ ಮಿಷನ್ ಮತ್ತು ಕಾಞಂಗಾಡು ಬ್ಲೋಕ್ ಪಂಚಾಯತ್ ಜಾರಿಗೊಳಿಸುವ ಸಿ ಫಾರ್ ಯೂ ಯೋಜನೆಯಲ್ಲಿ ಅಳವಡಿಸಿ ಈ ಯೋಜನೆ ಜಾರಿಗೊಳ್ಳಲಿದೆ. ಅಜಾನೂರು ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ರಾವಣೀಶ್ವರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಬಿದಿರು ದ್ವೀಪ ನಿರ್ಮಾಣಗೊಳ್ಳಲಿದೆ. ಶಾಲೆಯ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಇತರ ವಿದ್ಯಾರ್ಥಿಗಳು ಬಿದಿರು ಸಸಿಗಳನ್ನು ನೆಟ್ಟರು. 

               ಕಾಞಂಗಾಡು ಬ್ಲೋಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್ ಉದ್ಘಾಟಿಸಿದರು. ಅಜಾನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಟಿ.ಶೋಭಾ ಅಧ್ಯಕ್ಷತೆ ವಹಿಸಿದ್ದರು. ಹರಿತ ಕೇರಳಂ ಜಿಲ್ಲಾ ಮಿಷನ್ ಸಂಚಾಲಕ ಟಿ.ಟಿ.ಸುರೇಂದ್ರನ್ ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries