HEALTH TIPS

ಅಗಲ್ಪಾಡಿ ಭಜನ ಮಂದಿರದ ಭೋಜನಶಾಲೆ ಹಾಗೂ ಸಭಾ ಭವನ ಜ.15ರಂದು ಉದ್ಘಾಟನೆ: ಆಮಂತ್ರಣಪತ್ರಿಕೆ ಬಿಡುಗಡೆ

 

                         ಬದಿಯಡ್ಕ: ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ಭೋಜನ ಶಾಲೆ ಹಾಗೂ ಸಭಾ ಭವನದ ಉದ್ಘಾಟನಾ ಸಮಾರಂಭ 2022 ಜನವರಿ 14,15,16 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಪ್ರಸ್ತುತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಶ್ರೀ ಮಂದಿರದಲ್ಲಿ ಜರಗಿತು. 

                   ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ವಾಸುದೇವ ಭಟ್ ಉಪ್ಪಂಗಳ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಸಭಾಕಾರ್ಯಕ್ರಮದಲ್ಲಿ ನಿವೃತ್ತ ಬ್ಯಾಂಕ್ ಪ್ರಬಂಧಕ ಶಿವರಾಮ ಮಣಿಯಾಣಿ ಚೇರ್ಕೂಡ್ಲು ಆಮಂತ್ರಣಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಶ್ರೀಮಂದಿರದ ಅಧ್ಯಕ್ಷ ಬಾಬು ಮಾಸ್ತರ್ ಅಗಲ್ಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯರಾದ ತಲೇಕ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಎಂ.ಸಂಜೀವಶೆಟ್ಟಿ ಮೊಟ್ಟೆಕುಂಜ, ಪ್ರೊ.ಎ.ಶ್ರೀನಾಥ್, ಜನಾರ್ದನ ಮಣಿಯಾಣಿ ಬೆದ್ರುಕೂಡ್ಲು, ಕೃಷ್ಣಮೂರ್ತಿ ಮವ್ವಾರು, ವಾರ್ಡು ಸದಸ್ಯ ಹರೀಶ್ ಗೋಸಾಡ, ಶ್ರೀನಿವಾಸ ಅಮ್ಮಣ್ಣಾಯ, ರತ್ನಾಕರ, ಜಯರಾಜ ಕುಣಿಕುಳ್ಳಾಯ, ಮಂದಿರದ ಅರ್ಚಕ ನಾರಾಯಣ ಭಟ್, ಬಾಬು ಮಣಿಯಾಣಿ ಜಯನಗರ ಮೊದಲಾದವರು ಪಾಲ್ಗೊಂಡಿದ್ದರು. ರಾಜೇಶ್ ಮಾಸ್ತರ್ ಅಗಲ್ಪಾಡಿ ಸ್ವಾಗತಿಸಿ, ಅಚ್ಚುತ ಮಾಸ್ತರ್ ಅಗಲ್ಪಾಡಿ ವಂದಿಸಿದರು. ಕಾರ್ಯದರ್ಶಿ ರಮೇಶ್ ಕೃಷ್ಣ ಪದ್ಮಾರು ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries