ನವದೆಹಲಿ: ಸುಮಾರು 21 ತಿಂಗಳ ಬಳಿಕ ದೇಶದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸೇವೆ ಆರಂಭವಾಗುತ್ತಿದ್ದು, ಡಿಸೆಂಬರ್ 15ರಿಂದ ನಿಗದಿತ ವಿಮಾನಗಳ ಹಾರಾಟ ನಡೆಯಲಿದೆ ಎಂದು ನಾಗರಿಕ ವಿಮಾನಗಳ ಸಚಿವಾಲಯ ಶುಕ್ರವಾರ ಹೇಳಿದೆ.
0
samarasasudhi
ನವೆಂಬರ್ 26, 2021
ನವದೆಹಲಿ: ಸುಮಾರು 21 ತಿಂಗಳ ಬಳಿಕ ದೇಶದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸೇವೆ ಆರಂಭವಾಗುತ್ತಿದ್ದು, ಡಿಸೆಂಬರ್ 15ರಿಂದ ನಿಗದಿತ ವಿಮಾನಗಳ ಹಾರಾಟ ನಡೆಯಲಿದೆ ಎಂದು ನಾಗರಿಕ ವಿಮಾನಗಳ ಸಚಿವಾಲಯ ಶುಕ್ರವಾರ ಹೇಳಿದೆ.
'ಭಾರತದಿಂದ ಪ್ರಯಾಣಿಸುವ ಮತ್ತು ವಿದೇಶದಿಂದ ಇಲ್ಲಿಗೆ ಬರುವ ಅಂತರರಾಷ್ಟ್ರೀಯ ನಾಗರಿಕ ವಿಮಾನ ಸೇವೆಗಳನ್ನು ಪುನರಾರಂಭಿಸುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ. ನಿಗದಿತ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು 2021ರ ಡಿಸೆಂಬರ್ 15ರಿಂದ ಪುನರಾರಂಭಿಸಲಾಗುತ್ತದೆ' ಎಂದು ನಾಗರಿಕ ವಿಮಾನಯಾನ ಸಚಿವಾಲಯವು ಆದೇಶ ಹೊರಡಿಸಿದೆ.