HEALTH TIPS

ಓಮಿಕ್ರಾನ್ ಆತಂಕ ನಡುವೆ ಕೋವಿಡ್ ಸಕ್ರಿಯ ಪ್ರಕರಣ ಮತ್ತಷ್ಟು ಇಳಿಕೆ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,309 ಹೊಸ ಕೇಸು, 236 ಸಾವು

      ನವದೆಹಲಿ: ಓಮಿಕ್ರಾನ್ ರೂಪಾಂತರಿ ಕೊರೋನಾ ಆತಂಕದ ನಡುವೆ ಭಾರತದಲ್ಲಿ ಸೋಂಕಿನ ಅಬ್ಬರ ನಿನ್ನೆಗಿಂತ ಇಂದು ಸೋಮವಾರ ಮತ್ತಷ್ಟು ಕಡಿಮೆಯಾಗಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 309 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 236 ಮಂದಿ ಮೃತಪಟ್ಟಿದ್ದಾರೆ.

      ಸೋಮವಾರ ಬೆಳಗ್ಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,72,523ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,68,554ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

       ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ 03 ಸಾವಿರದ 859 ಇದ್ದು ಕಳೆದ 24 ಗಂಟೆಗಳಲ್ಲಿ 9 ಸಾವಿರದ 905 ಗುಣಮುಖರಾಗಿದ್ದಾರೆ, ಕಳೆದ 544 ದಿನಗಳಲ್ಲಿಯೇ ಕಡಿಮೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

       ಭಾರತದಲ್ಲಿ ಇದುವರೆಗೆ 64.02 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 122.41 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries