HEALTH TIPS

ಪಿಎಂಎವೈಯು: 3.6 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ

             ನವದೆಹಲಿ: ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆ-ನಗರ (ಪಿಎಂಎವೈಯು) ಅಡಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

          ಇದರೊಂದಿಗೆ ಅನುಮೋದನೆ ನೀಡಲಾದ ಮನೆಗಳ ಒಟ್ಟು ಸಂಖ್ಯೆ 1.14 ಕೋಟಿ ಆಗಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

           'ಸಚಿವಾಲಯದ ಕಾರ್ಯದರ್ಶಿ ದುರ್ಗಾಶಂಕರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರೀಯ ಮಂಜೂರಾತಿ ಮತ್ತು ಮೇಲ್ವಿಚಾರಣಾ ಸಮಿತಿ (ಸಿಎಸ್‌ಎಂಸಿ) ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು' ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

              'ಅನುಮೋದಿತ ಮನೆಗಳ ಪೈಕಿ 89 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, 52.5 ಲಕ್ಷ ಮನೆಗಳು ಪೂರ್ಣಗೊಂಡಿದ್ದು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ' ಎಂದು ಪ್ರಕಟಣೆ ತಿಳಿಸಿದೆ.

            '₹ 7.52 ಲಕ್ಷ ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಪಾಲು ₹ 1.85 ಲಕ್ಷ ಕೋಟಿ. ಈ ವರೆಗೆ ಕೇಂದ್ರ ಸರ್ಕಾರ ₹ 1.13 ಲಕ್ಷ ಕೋಟಿ ಬಿಡುಗಡೆ ಮಾಡಿದೆ' ಎಂದೂ ಸಚಿವಾಲಯ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries