HEALTH TIPS

744 ಕೇರಳ ಪೊಲೀಸರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳು: ಪಿಣರಾಯಿ ವಿಜಯನ್ ಬಹಿರಂಗ

      ತಿರುವನಂತಪುರ:  ರಾಜ್ಯದಲ್ಲಿ ಒಟು 744 ಮಂದಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಹಾಗೂ ಅವರಲ್ಲಿ 18 ಮಂದಿ ಸೇವೆಯಿಂದ ಅಮಾನತುಗೊಂಡಿದ್ದಾರೆ ಎನ್ನುವ ಸಂಗತಿ ಬಹಿರಂಗಗೊಂಡಿದೆ.
        ಈ ಬಗ್ಗೆ ಸ್ವತಃ ಮುಖ್ಯಮಂತ್ರಿ  ಪಿಣರಾಯಿ ವಿಜಯನ್ ಅವರೇ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶಾಸಕರೊಬ್ಬರು ವಿಧಾನಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಪಿಣರಾಯಿ ವಿಜಯನ್ ಈ ವಿವರ ನೀಡಿದ್ದಾರೆ. 
         ರಾಜ್ಯದಲ್ಲಿ ಪೊಲೀಸರು ಕ್ರಿಮಿನಲ್ ದೌರ್ಜನ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಹೀಗಾಗಿ ತಾವು ವಿಧಾನಸಭೆಯಲ್ಲಿ ಪ್ರಶ್ನೆ ಕೇಳಿದ್ದಾಗಿ ಶಾಸಕ ರೆಮ ಅವರು ತಿಳಿಸಿದ್ದಾರೆ. ಪೊಲೀಸರ ಸಮೂಹದಲ್ಲೇ ಕ್ರಿಮಿನಲ್ ಗಳು ಇದ್ದಾರೆ ಎನ್ನುವುದು ಆತಂಕದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
          ಡಿಪಾರ್ಟ್ ಮೆಂಟ್ ಮಟ್ಟದಲ್ಲಿ ಕ್ರಿಮಿನಲ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟನೆ ನೀಡುತ್ತಿದ್ದರೂ ಅದರಿಂದ ಪ್ರಯೋಜನವಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries