HEALTH TIPS

ಕೇರಳದಲ್ಲಿ ಮುಂದುವರಿದ ಮಳೆ ಅಬ್ಬರ: ಮೂವರ ಸಾವು

              ಕೊಚ್ಚಿ: ಕೇರಳದಲ್ಲಿ ಸೋಮವಾರವು ಮಳೆಯ ಅಬ್ಬರ ಮುಂದುವರಿದಿದ್ದು, ಮೂವರು ಮೃತಪಟ್ಟಿದ್ದಾರೆ. ಹಲವು ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿವೆ.

            ಎರ್ನಾಕುಲಂ, ಇಡುಕ್ಕಿ, ತ್ರಿಶೂರ್‌, ಕೋಯಿಕ್ಕೋಡ್‌, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) 'ಆರೆಂಜ್‌ ಅಲರ್ಟ್‌' ಘೋಷಿಸಿದೆ.


              ಮಳೆಯಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಒಂದು ಮನೆ ಸಂಪೂರ್ಣ ಕುಸಿದಿದ್ದು, 28 ಮನೆಗಳು ಭಾಗಶಃ ಧ್ವಂಸವಾಗಿವೆ.

                ಕಳೆದ 24 ಗಂಟೆಗಳಲ್ಲಿ ಕೊಲ್ಲಂ, ಕೊಟ್ಟಾಯಂ, ತಿರುವನಂತಪುರಂ, ಇಡುಕ್ಕಿ ಮತ್ತು ತ್ರಿಶ್ಶೂರ್‌ ಜಿಲ್ಲೆಗಳಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

              ಅಕ್ಟೋಬರ್‌ 1 ರಿಂದ 15ರವರೆಗೆ ಕೇರಳದಲ್ಲಿ 833.8 ಮೀ.ಮೀ ಮಳೆಯಾಗಿದೆ. ಸತತ ಮಳೆಯಿಂದಾಗಿ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಸೋಮವಾರ ಮತ್ತು ಮಂಗಳವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿವೆ.

           ಮೀನುಗಾರರಿಗೆ ಎಚ್ಚರಿಕೆ: ರಾಜ್ಯದ ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 60 ಕಿ.ಮೀ. ಇರುವ ಸಾಧ್ಯತೆ ಇದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries