ಕಾಸರಗೋಡು: ಕೌಟುಂಬಿಕ ಬಾಂಧವ್ಯ ಹದಗೆಟ್ಟ ಪರಿಣಾಮ ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ತಿಳಿಸಿದರು.
ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಸಮಾಜ ಸಾಮೂಹಿಕವಾಗಿ ಸ್ಪಂದಿಸಬೇಕು. ಪ್ರತಿದಿನ ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇದು ಸಾಮಾಜಿಕ ಪಿಡುಗಾಗಿ ಬದಲಾಗಿದೆ. ದಂಪತಿಗಳು ಕ್ಷುಲ್ಲಕ ವಿಷಯಗಳಿಗೆ ವಿಚ್ಛೇದನ ಪಡೆದಾಗ, ತಮ್ಮ ಮಕ್ಕಳು ಮಾನಸಿಕವಾಗಿ ಕುಗ್ಗಿಹೋಗುತ್ತಾರೆ ಎಂಬುದನ್ನು ಅವರು ಅರ್ಥಮಾಡಿಕೊಳ್ಳಲು ವಿಫಲರಾಗುತ್ತಾರೆ. ಹೊಸ ಸಾಮಾಜಿಕ ಸಂದರ್ಭದಲ್ಲಿ, ಮಕ್ಕಳ ಕೇಂದ್ರಿತ ಯೋಜನೆಗಳು ಮತ್ತು ಚಟುವಟಿಕೆಗಳು ಅತ್ಯಗತ್ಯ. ಮಕ್ಕಳ ಸೃಜನಶೀಲತೆಯನ್ನು ಅಭಿವೃದ್ಧಿಪಡಿಸಲು ಕ್ರಮಗಳು ಸಹ ಅಗತ್ಯ. ನಮ್ಮ ಮಕ್ಕಳು ಭವಿಷ್ಯದ ಪ್ರಜೆಗಳು. ಮುಂದಿನ ಪೀಳಿಗೆಯ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ಗುರುತಿಸಿ ಪೆÇ್ರೀತ್ಸಾಹಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಈ ಸಂದರ್ಭ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಕಾಸರಗೋಡು ಕಲೆಕ್ಟರೇಟ್ ನಲ್ಲಿ ಮಕ್ಕಳ ದಿನಾಚರಣೆಯೂ ನಡೆಯಿತು. ಜೊತೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.




