HEALTH TIPS

ಓಮಿಕ್ರಾನ್ ಆತಂಕ: ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಣೆ

            ಚೆನ್ನೈ: ಕೊರೊನಾವೈರಸ್‌ನ ರೂಪಾಂತರ ಹಾಗೂ ಭಾರೀ ಅಪಾಯಕಾರಿ ಎಂದು ಗುರುತಿಸಲ್ಪಟ್ಟಿರುವ ಓಮಿಕ್ರಾನ್ ವೈರಸ್ ದಾಳಿ ಇಡುತ್ತಿರುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

         ಈ ನಿಟ್ಟಿನಲ್ಲಿ ತಮಿಳುನಾಡು ಆರೋಗ್ಯ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ಕಳುಹಿಸಿದ್ದು, ಓಮಿಕ್ರಾನ್ ವಿಷಯವಾಗಿ ಉನ್ನತ ಮಟ್ಟದ ನಿಗಾ ವಹಿಸುವುದು ತೀರಾ ಅವಶ್ಯಕ ಎಂದು ತಿಳಿಸಿದೆ.

               ಅಲ್ಲದೇ ವಿಮಾನ ನಿಲ್ದಾಣಗಳಲ್ಲಿ ಹೆಚ್ಚು ತಪಾಸಣಾ ಘಟಕಗಳನ್ನು ತೆರೆಯಲು ಆದೇಶಿಸಲಾಗಿದ್ದು, ವಿದೇಶಗಳಿಂದ ತಮಿಳುನಾಡಿಗೆ ಬಂದವರನ್ನು ಟ್ಯ್ರಾಕ್ ಮಾಡಿ, ಅವರ ಆರೋಗ್ಯ ಪರೀಕ್ಷೆ ಮಾಡಲು ಸೂಚಿಸಲಾಗಿದೆ.

           'ಈಗಾಗಲೇ ನಾವು ಓಮಿಕ್ರಾನ್ ವಿಷಯವಾಗಿ ಕೇಂದ್ರ ಸರ್ಕಾರದಿಂದ ಸಲಹೆ ಸೂಚನೆಗಳನ್ನು ಸ್ವೀಕರಿಸಿದ್ದೇವೆ. ಆ ನಿಟ್ಟಿನಲ್ಲಿ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹೈ ಅಲರ್ಟ್ ಕೊಟ್ಟಿದ್ದು, ವಿದೇಶದಿಂದ ಬಂದವರನ್ನು ತಪಾಸಣೆ ಮಾಡಲು ಕೇಂದ್ರ ನೀಡಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ' ಎಂದು ತಮಿಳುನಾಡು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಎಂಬ ರೂಪಾಂತರಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಇದನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್‌ಓ) ಅತ್ಯಂತ ಅಪಾಯಕಾರಿ ಎಂದು ಗುರುತಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries