HEALTH TIPS

ಓಮೈಕ್ರಾನ್‌ ವಿರುದ್ಧವೂ ಕೋವ್ಯಾಕ್ಸಿನ್ ಪರಿಣಾಮಕಾರಿಯೇ? ಭಾರತ್ ಬಯೋಟೆಕ್‌ ಅಧ್ಯಯನ

             ಹೈದರಾಬಾದ್: ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮೈಕ್ರಾನ್ ವಿರುದ್ಧವೂ ಕೋವ್ಯಾಕ್ಸಿನ್ ಲಸಿಕೆ ಕೆಲಸ ಮಾಡುತ್ತದೆಯೇ ಎಂಬುದನ್ನು ಅಧ್ಯಯನ ನಡೆಸುತ್ತಿರುವುದಾಗಿ ಲಸಿಕೆ ತಯಾರಿಕಾ ಕಂಪನಿ ಭಾರತ್ ಬಯೋಟೆಕ್ ಹೇಳಿದೆ.

               ಈಗಾಗಲೇ ಅಸ್ತಿತ್ವದಲ್ಲಿರುವ ಕೋವಿಡ್ ಲಸಿಕೆಗಳು ಓಮೈಕ್ರಾನ್ ವಿರುದ್ಧ ಕಡಿಮೆ ಪರಿಣಾಮಕಾರಿಯಾಗಿರಬಹುದು ಎಂದು ಔಷಧ ತಯಾರಿಕಾ ಕಂಪನಿ ಮೊಡೆರ್ನಾ ಸಿಇಒ ಎಚ್ಚರಿಕೆ ನೀಡಿದ್ದರು.


              ಇದರ ಬೆನ್ನಲ್ಲೇ ಕೋವ್ಯಾಕ್ಸಿನ್ ಪರಿಣಾಮಕಾರಿತ್ವದ ಬಗ್ಗೆ ಅಧ್ಯಯನ ನಡೆಸುತ್ತಿರುವುದಾಗಿ ಭಾರತ್ ಬಯೊಟೆಕ್ ಹೇಳಿದೆ.

              'ಚೀನಾದ ವುಹಾನ್‌ನಲ್ಲಿ ಮೊದಲು ಪತ್ತೆಯಾಗಿದ್ದ ಕೊರೊನಾ ವೈರಸ್ ತಳಿಯ ವಿರುದ್ಧ ಕೋವ್ಯಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿತ್ತು' ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

'ಆದರೆ, ಕೋವ್ಯಾಕ್ಸಿನ್ ಲಸಿಕೆಯು ಡೆಲ್ಟಾ ಸೇರಿದಂತೆ ಕೊರೊನಾ ವೈರಸ್‌ನ ಇತರ ರೂಪಾಂತರ ತಳಿಗಳ ವಿರುದ್ಧವೂ ಪರಿಣಾಮಕಾರಿಯಾಗಿರುವುದು ಅಧ್ಯಯನಗಳಿಂದ ತಿಳಿದುಬಂದಿತ್ತು. ಹೊಸ ರೂಪಾಂತರಗಳ ಮೇಲೆ ಲಸಿಕೆಯ ಪ್ರಭಾವ ಎಷ್ಟಿದೆ ಎಂಬುದನ್ನು ಅಧ್ಯಯನ ನಡೆಸುತ್ತಿದ್ದೇವೆ' ಎಂದು ವಕ್ತಾರರು ಹೇಳಿದ್ದಾರೆ.

              ಕೋವ್ಯಾಕ್ಸಿನ್ ಎರಡು ಡೋಸ್‌ಗಳ ಪರಿಣಾಮಕಾರಿತ್ವ ಶೇ 77.8ರಷ್ಟಿದೆ. ಡೆಲ್ಟಾ ರೂಪಾಂತರದ ವಿರುದ್ಧ ಕೋವ್ಯಾಕ್ಸಿನ್‌ ಲಸಿಕೆಯ ಎರಡು ಡೋಸ್‌ಗಳು ಶೇ 50ರಷ್ಟು ಪರಿಣಾಮಕಾರಿ ಎಂದು 'ದಿ ಲ್ಯಾನ್ಸೆಟ್ ಇನ್‌ಫೆಕ್ಷಿಯಸ್ ಡಿಸೀಸ್ ಜರ್ನಲ್‌'ನಲ್ಲಿ ಇತ್ತೀಚೆಗೆ ಪ್ರಕಟಗೊಂಡಿದ್ದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries