ಪಾಲಕ್ಕಾಡ್: ಮಂಬರಮ್‌ನ ಪಟ್ಟಪ್ಪಕಲ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ. ಮೃತರನ್ನು ಎಲಪ್ಪುಳ್ಳಿಯ ಸಂಜಿತ್ (27) ಎಂದು ಗುರುತಿಸಲಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಬೆಳಗ್ಗೆ ಪತ್ನಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸಂಜಿತ್ ನನ್ನು ಕಾರಿನಲ್ಲಿ ಬಂದ ಗುಂಪೊಂದು ಕಡಿದು ಹತ್ಯೆ ಮಾಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹತ್ಯೆಯ ಹಿಂದೆ ಎಸ್‌ಡಿಪಿಐ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.