HEALTH TIPS

ವಿಪಕ್ಷಗಳಿಂದ ಭಾರೀ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

         ನವದೆಹಲಿ: ಪ್ರತಿಪಕ್ಷಗಳ ತೀವ್ರ ಗದ್ದಲ ಹಿನ್ನೆಲೆಯಲ್ಲಿ ಲೋಕಸಭೆ ಕಲಾಪವನ್ನು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

            ಲೋಕಸಭೆಯಲ್ಲಿ ಇಂದು ಆರಂಭವಾದ ಚಳಿಗಾಲ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲವನ್ನುಂಟು ಮಾಡಿತು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮೂರು ಬಾರಿ ಮುಂದೂಡಲಾಯಿತು.

      ಕಲಾಪ ಆರಂಭವಾಗುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೃಷಿ ಕಾಯ್ದೆ ರದ್ದತಿ-2021 ರ ಮಸೂದೆ ಕುರಿತ ಪ್ರಸ್ತಾವನೆ ಸಲ್ಲಿಸಿದರು. ಈ ವೇಳೆ ಎದುರಾದ ತೀವ್ರ ಗದ್ದಲದ ನಡುವೆಯೇ ಮಸೂದೆಯನ್ನು ಹಿಂಪಡೆಯಲಾಯಿತು.

              ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು, ಮಸೂದೆಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಸಬೇಕೆಂದು ಪಟ್ಟು ಹಿಡಿದಿದ್ದರು. ಈ ವೇಳೆ ತೀವ್ರ ಗದ್ದಲ ಸೃಷ್ಟಿಯಾಗಿತ್ತು. ಬಳಿಕ ಲೋಕಸಭೆಯ ಕಲಾಪವನ್ನು ಎರಡನೇ ಬಾರಿಗೆ ಮಧ್ಯಾಹ್ನ 2:00 ಗಂಟೆಗೆ ಮುಂದೂಡಲಾಯಿತು.

              ಮಧ್ಯಾಹ್ನ 2 ಗಂಟೆಗೆ ಮತ್ತೆ ಕಲಾಪ ಆರಂಭವಾದಾಗಲೂ ವಿಪಕ್ಷಗಳ ನಾಯಕರು ತೀವ್ರ ಗದ್ದಲವನ್ನುಂಟು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries