HEALTH TIPS

ನೆಟ್-ಪಿಜಿ ಪರೀಕ್ಷೆಗಳು ಏಕಕಾಲದಲ್ಲಿ: ಗೊಂದಲಕ್ಕೀಡಾದ ಕೇರಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು

                                                 

                     ತಿರುವನಂತಪುರ: ಕೇರಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ಪರೀಕ್ಷೆ ಮತ್ತು ಯುಜಿಸಿ ನೆಟ್ ಪರೀಕ್ಷೆ ಒಂದೇ ದಿನ ನಡೆಯಲಿದೆ. ಹಾಗಾಗಿ ಎರಡು ಪರೀಕ್ಷೆಗಳನ್ನು ಏಕಕಾಲದಲ್ಲಿ ಬರೆಯುವುದು ಹೇಗೆ ಎಂದು ತಿಳಿಯದೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. 

                     ನ.15 ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ನಡೆಯಬೇಕಿತ್ತು. ಆದರೆ 22, 24 ಮತ್ತು 26ಕ್ಕೆ ಮುಂದೂಡಲಾಯಿತು. 22ರಂದು ನೆಟ್ ಪರೀಕ್ಷೆ ಆರಂಭವಾಗಲಿದೆ. ಇದರೊಂದಿಗೆ ಕೇರಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿರುವರು. 

                  ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡುವಂತೆ ವಿಶ್ವವಿದ್ಯಾಲಯವನ್ನು ಕೇಳಿದರೂ ಅವರು ನಿರಾಕರಿಸಿದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿಶ್ವವಿದ್ಯಾನಿಲಯ ಒಕ್ಕೂಟವೂ ಅಧಿಕಾರಿಗಳಿಗೆ ದೂರು ನೀಡಿತ್ತು. ಆದರೆ, ವಿಶ್ವವಿದ್ಯಾನಿಲಯ ಈವರೆಗೆ ಯಾವುದೇ ತೃಪ್ತಿಕರ  ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ವಿಶ್ವವಿದ್ಯಾಲಯ ಸಮರ್ಪಕ ನಿರ್ಧಾರ ತಳೆಯುವರೆಂದು ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು ಇದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries