ಮಧೂರು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಭವನದ ಬಗ್ಗೆ ಪ್ರತಿಷ್ಠಾನದ ಸದಸ್ಯರು ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂದರ್ಶಿಸಿ ಪೂಜ್ಯ ಖಾವಂದರಿಗೆ ಮನವಿ ಸಲ್ಲಿಸಿ ಕಾಮಗಾರಿ ಪ್ರಗತಿ ಮಾಹಿತಿ ನೀಡಿದರು.
ತಂಡದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಕೋಶಾಧಿಕಾರಿ ಲಕ್ಷ್ಮೀನಾರಾಯಣ ತಂತ್ರಿ ಕಾವು ಮಠ, ಸದಸ್ಯರಾದ ಯೋಗೀಶ ರಾವ್ ಚಿಗುರುಪಾದೆ, ಜಗದೀಶ ಕೂಡ್ಲು, ಭಾಸ್ಕರ ಆಳ್ವ, ಜಯರಾಮ ರೈ ಭಾಗವಹಿಸಿದ್ದರು.




