ಕಾಸರಗೋಡು: ಮಂಗಳೂರಿನ ಸಕ್ರ್ಯೂಟ್ ಹೌಸ್‍ನಲ್ಲಿ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ವತಿಯಿಂದ ಸ್ಥಾಪಕಾಧ್ಯಕ್ಷ ವಾಮನ್ ರಾವ್ ಬೇಕಲ್ ಹಾಗೂ ಕೋಶಾಧಿಕಾರಿ ಸಂಧ್ಯಾರಾಣಿ ಟೀಚರ್, ನಿರ್ದೇಶಕರುಗಳಾದ ಪ್ರೊ.ಎ. ಶ್ರೀನಾಥ್, ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರು ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ಹಾಗು ಪುಸ್ತಕ ಹಾರವನ್ನು ನೀಡಿ ಕಾಸರಗೋಡಿನ ಕನ್ನಡಿಗರ ಪರವಾಗಿ ಗೌರವಾಭಿನಂದನೆ ಸಲ್ಲಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಗಡಿನಾಡು ಕಾಸರಗೋಡಿನ ಜ್ವಲಂತ ಸಮಸ್ಯೆಗಳ ಕುರಿತು ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಸೋಮಶೇಖರ ಗಾಂಜಿ, ದ.ಕ. ಹೆಚ್ಚುವರಿ ಜಿಲ್ಲಾಧಿಕಾರಿ ಮಾಣಿಕ್ಯ, ಕನ್ನಡ ಮತ್ತು ಸಂಸ್ಕøತಿಯ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಸಹಾಯಕ ಕಾರ್ಯದರ್ಶಿ ತೇಜಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

