ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ಶನಿವಾರ ನಡೆದ ಸಭೆಯಲ್ಲಿ ರಾಜಸ್ಥಾನದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು PTI ವರದಿ ಮಾಡಿದೆ. ಸಚಿವ ಸಂಪುಟ ಪುನರ್ ರಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲಾಗಿದೆ.
0
samarasasudhi
ನವೆಂಬರ್ 20, 2021
ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ಶನಿವಾರ ನಡೆದ ಸಭೆಯಲ್ಲಿ ರಾಜಸ್ಥಾನದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು PTI ವರದಿ ಮಾಡಿದೆ. ಸಚಿವ ಸಂಪುಟ ಪುನರ್ ರಚನೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲಾಗಿದೆ.
ಸಭೆಯಲ್ಲಿ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಸಾರಿಗೆ ಉಸ್ತುವಾರಿ ಹೊತ್ತಿದ್ದ ಪ್ರತಾಪ್ ಸಿಂಹ ಖಚರಿಯಾವಾಸ್ ಸುದ್ದಿಗಾರರಿಗೆ ತಿಳಿಸಿದರು.
ಶುಕ್ರವಾರ ಇತರ ಇಬ್ಬರು ಸಚಿವರೊಂದಿಗೆ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ ಅವರು ಸಭೆಯ ಆರಂಭದಲ್ಲಿ ಪ್ರಸ್ತಾವನೆ ಮಂಡಿಸಿದರು ಮತ್ತು ನಂತರ ಎಲ್ಲಾ ಸಚಿವರು ರಾಜೀನಾಮೆ ನೀಡಿದರು.
"ಭಾನುವಾರ ಮಧ್ಯಾಹ್ನ 2 ಗಂಟೆಗೆ ಪಿಸಿಸಿ ಕಚೇರಿಗೆ ಹೋಗುವಂತೆ ನಮಗೆ ತಿಳಿಸಲಾಗಿದೆ, ಅಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಮತ್ತು ಪಿಸಿಸಿ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಾಸ್ರಾ ಅವರು ಹೆಚ್ಚಿನ ಸೂಚನೆಗಳನ್ನು ನೀಡುತ್ತಾರೆ" ಎಂದು ಖಚರಿಯಾವಾಸ್ ಹೇಳಿದ್ದಾರೆ.