ತಿರುವನಂತಪುರ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣ: ಆರೋಪಿ ಸ್ವಪ್ನಾ ಸುರೇಶ್ ಜೈಲಿನಿಂದ ಬಿಡುಗಡೆ
0
ನವೆಂಬರ್ 06, 2021
Tags
0
samarasasudhi
ನವೆಂಬರ್ 06, 2021
ತಿರುವನಂತಪುರ: ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಯುಎಪಿಎ (ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ) ಅಡಿಯಲ್ಲಿ ಎನ್‌ಐಎ ದಾಖಲಿಸಿದ್ದ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನವೆಂಬರ್ 2ರಂದು ಅವರಿಗೆ ಜಾಮೀನು ನೀಡಿತ್ತು.
₹25 ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇಲೆ ಜಾಮೀನು ಮಂಜೂರು ಮಾಡಲಾಗಿತ್ತು.
ಸ್ವಪ್ನಾ ಸುರೇಶ್ ಜತೆಗೆ ಇತರ ಆರೋಪಿಗಳಾದ ಮೊಹಮ್ಮದ್ ಶಫಿ ಪಿ, ಜಲಾಲ್ ಎ.ಎಂ., ರಾಬಿನ್ಸ್ ಹಮೀದ್, ರಮೀಸ್ ಕೆ.ಟಿ., ಶರಫುದ್ದೀನ್ ಕೆ.ಟಿ., ಸರಿತಾ ಪಿ.ಎಸ್ ಮತ್ತು ಮೊಹಮ್ಮದ್ ಅಲಿ ಅವರಿಗೂ ಜಾಮೀನು ಸಿಕ್ಕಿತ್ತು.