HEALTH TIPS

ಪಾಕ್-ಚೀನಾ ಮಿಲಿಟರಿ ಸಹಕಾರದಿಂದ ಪ್ರಾದೇಶಿಕ ಭದ್ರತೆಗೆ ಧಕ್ಕೆ: ಅಡ್ಮಿರಲ್ ಕರಂವೀರ್

       ಮುಂಬೈ: 'ಹಡಗುಗಳು, ಜಲಾಂತರ್ಗಾಮಿಗಳೂ ಸೇರಿದಂತೆ ಹಲವಾರು ಮಿಲಿಟರಿ ಸಾಮಗ್ರಿಗಳನ್ನು ಪಾಕಿಸ್ತಾನಕ್ಕೆ ಚೀನಾ ಪೂರೈಸುತ್ತಿದೆ. ಉಭಯ ದೇಶಗಳ ನಡುವಿನ ಈ ಸಹಕಾರ ಪ್ರಾದೇಶಿಕ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ' ಎಂದು ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂವೀರ್‌ ಸಿಂಗ್‌ ಗುರುವಾರ ಹೇಳಿದರು.

        ಸ್ಕಾರ್ಪಿಯಾನ್‌ ಸರಣಿಯ ಜಲಾಂತರ್ಗಾಮಿ 'ಐಎನ್‌ಎಸ್‌ ವೇಲಾ'ವನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಈ ವಿಷಯ ತಿಳಿಸಿದರು.
       ನೌಕಾಪಡೆಗೆ ಸಂಬಂಧಿಸಿ ಚೀನಾ ಮತ್ತು ಪಾಕಿಸ್ತಾನಗಳ ನಡುವಿನ ಈ ಸಹಕಾರವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಬೆಳವಣಿಗೆಯಿಂದಾಗಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹ ಭಾರತ ಸನ್ನದ್ಧವಾಗಬೇಕಿದೆ' ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

       ಚೀನಾ ಸ್ಟೇಟ್‌ ಶಿಪ್‌ಬಿಲ್ಡಿಂಗ್ ಕಾರ್ಪೊರೇಷನ್‌ ಲಿಮಿಟೆಡ್‌ (ಸಿಎಸ್‌ಎಸ್‌ಸಿ) ನಿರ್ಮಿಸಿರುವ ಯುದ್ಧನೌಕೆಯೊಂದನ್ನು ಇತ್ತೀಚೆಗೆ ಶಾಂಘೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries