HEALTH TIPS

ಲಸಿಕೆ ಪಡೆದಿಲ್ಲವೇ? ಕೋವಿಡ್‌ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ಇಲ್ಲ!: ಕೇರಳ ಸರ್ಕಾರದ ಮಹತ್ವದ ನಿರ್ಧಾರ

                ತಿರುವನಂತಪುರಂ: ಕೇರಳದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿನ್ನೆ  4,723 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 43,663. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೋವಿಡ್ ಹರಡುವಿಕೆ ತಡೆಗೆ ಜನರ ಸಹಕಾರ ಕೋರಿದ್ದದಾರೆ. ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಕೋವಿಡ್ ಸೋಂಕು ತಗುಲಿದರೆ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದ್ದಾರೆ. 

             ಯಾರು ಇದುವರೆಗೂ ಆರೋಗ್ಯ ಪರಿಸ್ಥಿತಿಯ ಕಾರಣಕ್ಕೆ ಕೋವಿಡ್ ಲಸಿಕೆ ಪಡೆದಿಲ್ಲವೋ ಅವರು ಆ ಕುರಿತು ಸರ್ಕಾರಿ ವೈದ್ಯರಿಂದ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಕೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮಂಗಳವಾರ ತಿಳಿಸಿದ್ದಾರೆ. ಕೋವಿಡ್ ಮಾರ್ಗಸೂಚಿ ಪಾಲನೆಗೆ ಸಹಕಾರ ನೀಡದಿದ್ದರೆ ಉಚಿತ ಚಿಕಿತ್ಸೆ ನೀಡುವುದಿಲ್ಲ. ಶಿಕ್ಷಕರು, ಕಚೇರಿಯಿಂದ ಕೆಲಸ ಮಾಡುವ ಉದ್ಯೋಗಿಗಳು, ಜನರ ಜೊತೆ ವ್ಯವಹಾರ ನಡೆಸುವವರು ಪ್ರತಿವಾರ ಆರ್‍ಟಿಪಿಸಿಆರ್ ಪರೀಕ್ಷೆ ವರದಿಯನ್ನು ಸಲ್ಲಿಸಬೇಕು, ಇದಕ್ಕಾಗಿ ಅವರೇ ಪರೀಕ್ಷಾ ವೆಚ್ಚ ಭರಿಸಬೇಕು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ. 

          "ಆರೋಗ್ಯ ಸಮಸ್ಯೆಯಿಂದಾಗಿ ಇದುವರೆಗೂ ಕೋವಿಡ್ ಲಸಿಕೆ ಪಡೆಯದ ಶಿಕ್ಷಕರು, ಬೋಧಕೇತರ ಸಿಬ್ಭಂದಿ ಸರ್ಕಾರಿ ವೈದ್ಯರಿಂದ ಈ ಕುರಿತು ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಉಳಿದವರು 7 ದಿನಕ್ಕೊಮ್ಮೆ ಆರ್‍ಟಿಪಿಸಿಆರ್ ವರದಿ ಸಲ್ಲಿಸಬೇಕು" ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಸಿಬ್ಭಂದಿಗಳ ಹಿತದೃಷ್ಟಿಯಿಂದ ಇಂತಹ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿಯಮಗಳು ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಭಂದಿಗಳಿಗೆ ಸಹ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ವಿದೇಶದಿಂದ ಆಗಮಿಸುವ ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಅಧಿಕಾರಿಗಳು ಮಾರ್ಗಸೂಚಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. 

              ಲಸಿಕಾ ಅಭಿಯಾನ; ಕೇರಳ ಸರ್ಕಾರ ಡಿಸೆಂಬರ್ 1 ರಿಂದ 15ರ ತನಕ ವಿಶೇಷ ಲಸಿಕಾ ಅಭಿಯಾನ ಆಯೋಜನೆ ಮಾಡಲಿದೆ. ಶಾಲೆಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಂಗವಿಕಲ ಮಕ್ಕಳು ಸಹ ಶಾಲೆಗೆ ಆಗಮಿಸಲು ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಓಮಿಕ್ರಾನ್ ಕೋವಿಡ್ ರೂಪಾಂತರಿ ಭೀತಿ ಹಿನ್ನಲೆಯಲ್ಲಿ ಕೋವಿಡ್ ಮಾರ್ಗಸೂಚಿಯಲ್ಲಿ ನಿಬರ್ಂಧ ಸಡಿಲಿಸಬಾರದು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಪ್ರಸ್ತುತ ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ರಾಜ್ಯ ಕೇರಳವಾಗಿದೆ. ಕೇರಳದಿಂದ ಬೇರೆ ರಾಜ್ಯಗಳಿಗೆ ಹೋಗುವ ವಿದ್ಯಾರ್ಥಿಗಳಿಂದಾಗಿ ಇತರ ರಾಜ್ಯಗಳಿಗೂ ಸೋಂಕು ಹಬ್ಬುತ್ತಿದೆ. ಮಂಗಳವಾರ ತುಮಕೂರು ಜಿಲ್ಲೆಯಲ್ಲಿ 15 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳು ಕೇರಳದಿಂದ ತುಮಕೂರಿನಲ್ಲಿರುವ ಎರಡು ನಸಿರ್ಂಗ್ ಕಾಲೇಜುಗಳಿಗೆ ಆಗಮಿಸಿದ್ದರು. ಕರ್ನಾಟಕ ಸರ್ಕಾರ ಕೇರಳ ಮತ್ತು ಮಹಾರಾಷ್ಟ್ರದಿಂದ ಆಗಮಿಸುವವರ ಮೇಲೆ ಅದರಲ್ಲೂ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳಿಗೆ ಆಗಮಿಸಿದ 7ನೇ ದಿನ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries