ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಭಾನುವಾರ ಪತ್ರ ಬರೆದಿದ್ದು, ಸೋಂಕು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ. ಸೋಂಕು ಹರಡುವಿಕೆ ಕುರಿತು ಸೂಕ್ಷ್ಮ ನಿಗಾ ವಹಿಸುವಂತೆ ಹಾಗೂ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ.




