ಬದಿಯಡ್ಕ: ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ನಿರ್ದೇಶಕಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಅವರ ಶಿಷ್ಯವೃಂದದವರಿಂದ ಪೆರಡಾಲ ಶ್ರೀ ಉದನೇಶ್ವರ ದೇವರ ಜಾತ್ರಾಮಹೋತ್ಸವದ ಸಂದಭರ್Àದಲ್ಲಿ ಶ್ರೀ ಶಿವಶಕ್ತಿ ಪೆರಡಾಲ ಇದರ 29ನೇ ವಾರ್ಷಿಕೋತ್ಸವದ ಅಂಗವಾಗಿ ಡಿ.15ರಂದು ರಾತ್ರಿ 8.30ರಿಂದ ಶ್ರೀ ಉದನೇಶ್ವರ ಸಭಾ ಭವನದಲ್ಲಿ ನೃತ್ಯಾರ್ಪಣಂ ಕಾರ್ಯಕ್ರಮ ಜರಗಲಿದೆ. ನಟುವಾಂಗದಲ್ಲಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಪುತ್ತೂರು, ಹಾಡುಗಾರಿಕೆಯಲ್ಲಿ ರಾಜ್ಯ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ವಿದ್ವಾನ್ ವೆಳ್ಳಿಕೋತ್ ವಿಷ್ಣು ಭಟ್, ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ಗೀತೇಶ್ ಕುಮಾರ್ ನೀಲೇಶ್ವರ, ಕೊಳಲಿನಲ್ಲಿ ರಾಜಗೋಪಾಲ್ ಕಾಞಂಗಾಡು ಜೊತೆಗೂಡಲಿದ್ದಾರೆ. ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಹಾಗೂ ಜಾನಪದ ನೃತ್ಯ ಸಂಪನ್ನಗೊಳ್ಳಲಿದೆ. ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆದುಬರುತ್ತಿರುವ ಧನುಸಂಕ್ರಮಣ ಶ್ರೀ ಭೂತಬಲಿ ಮಹೋತ್ಸವವು ಡಿಸೆಂಬರ್ 15 ಮತ್ತು 16ರಂದು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.




